ಮೈಸೂರು: ಖಾಸಗಿ ಬಸ್ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ ಸ್ಥಳದಲ್ಲೇ 8 ಮಂದಿ ದಾರುಣವಾಗಿ ಸಾವನ್ನಪ್ಪಿರೋ ಘಟನೆ ಕೊಳ್ಳೇಗಾಲ ಮುಖ್ಯರಸ್ತೆಯ ಕುರುಬೂರು ಗ್ರಾಮದ ಬಳಿ ಸಂಭವಿಸಿದೆ. 8 ಮೃತ ಮಂದಿ ಬಳ್ಳಾರಿ ಮೂಲದವರು ಎಂದು ತಿಳಿದಿದೆ.
ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 10 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ನರಸೀಪುರ ಪೋಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಸಂಬಂಧ ನರಸೀಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರ ವಿವರ ಇಂತಿದೆ : ಅಪಘಾತದಲ್ಲಿ ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದ ಮಂಜುನಾಥ (25), ಪೂರ್ಣಿಮಾ (30), ಕಾರ್ತಿಕ (8), ಪವನ್(7), ಗಾಯತ್ರಿ (28), ಶ್ರವ್ಯ (5), ಕೊಟ್ರೇಶ್(45), ಸುಜಾತ(40), ಸಂದೀಪ್ (23) ಮೃತಪಟ್ಟಿದ್ದಾರೆ. ಶಶಿಕುಮಾರ್ (30), ಜನಾರ್ದನ (32), ಪುನೀತ್ (7) ತೀವ್ರಗಾಯಗೊಂಡಿದ್ದಾರೆ.
ಬಸ್‌ನಲ್ಲಿದ್ದ 16 ಜನರಿಗೆ ಗಾಯ : 16 ಜನರು ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ.ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ ಆರ್ ಆಸ್ಪತ್ರೆಗೆ ರವಾನಿಸಲಾಗಿದೆ .ಅವರ ಪರಿಸ್ಥಿತಿಯೂ ಗಂಭೀರವಾಗಿದೆ ಎನ್ನಲಾಗುತ್ತಿದೆ.
ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು.
ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ… pic.twitter.com/xSUD80kNro— CM of Karnataka (@CMofKarnataka) May 29, 2023
2 ಲಕ್ಷ ಪರಿಹಾರ : ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು ಎಂದು ಅವರು ಟ್ವೀಟ್ ಮಾಡಿದ್ದಾರೆ.