ಲಕ್ನೋ: ಶುಕ್ರವಾರ ಅಕ್ಟೋಬರ್ 04 ಮುಂಜಾನೆ, ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಟ್ರ್ಯಾಕ್ಟರ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ ಸಂಭವಿಸದ ಪರಿಣಾಮ 10 ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮಿರ್ಜಾಪುರ-ವಾರಣಾಸಿ ಗಡಿಯಲ್ಲಿರುವ ಕಚ್ವಾ ಬಳಿ ಈ ಭೀಕರ ಅಪಘಾತ ನಡೆದಿದೆ. ಟ್ರ್ಯಾಕ್ಟರ್ ಟ್ರಾಲಿ ವಾರಣಾಸಿ ಕಡೆಗೆ 13 ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಟ್ರಕ್ ಚಾಲಕ ನಿಯಂತ್ರಣ ತಪ್ಪಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. 13 ಮಂದಿಯಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೂವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಿರ್ಜಾಪುರದ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ಕುಮಾರ್ ಸಿಂಗ್ ಹೇಳಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಚವಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಗೋಕಾಕ್ ಚಳವಳಿಯ 42ರ ಸಂಸ್ಮರಣಾ ಕಾಯಕ್ರಮ – ಡಾ. ಪುರುಷೋತ್ತಮ ಬಿಳಿಮಲೆ
ಸಂತಾಪ
ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಇದೊಂದು ನೋವಿನ ಘಟನೆ, ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಸಂತಾಪ ವ್ಯಕ್ತಪಡಿಸಿದ್ದು, ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪಟೇಲ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ನೋಡಿ: ಸಾಹಿತ್ಯ ಮತ್ತು ಸೌಹಾರ್ದತೆ – ಡಾ. ನಾಗಭೂಷಣ್ ಬಗ್ಗನಡುJanashakthi Media