ಮಧ್ಯಪ್ರದೇಶ: ತಮ್ಮ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡುತ್ತಿದ್ದವರ ವಿರುದ್ಧ ಜಮೀನಿನಲ್ಲೇ ಕುಳಿತು ಪ್ರತಿಭಟಿಸಿದ ಇಬ್ಬರು ಮಹಿಳೆಯರ ಮೇಲೆ ಟಿಪ್ಪರ್ ಮೂಲಕ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.ನಿರ್ಮಾಣ
ಮಮತಾ ಪಾಂಡೆ ಹಾಗೂ ಆಶಾ ಪಾಂಡೆ ಇಬ್ಬರು ಮಹಿಳೆಯರು ತಮ್ಮ ಜಮೀನಿನಲ್ಲಿ ಪರಿವಾರದ ಮತ್ತೊಬ್ಬ ಸದಸ್ಯರು ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದರು. ಇದಕ್ಕೆ ಮಮತಾ ಹಾಗೂ ಆಶಾ ಇಬ್ಬರು ವಿರೋಧಿಸಿದ್ದಾರೆ. ನಿಮ್ಮ ಜಮೀನಿಗೆ ದಾರಿಗಾಗಿ ನಮ್ಮ ಜಮೀನು ಬಲಿಕೊಡುವುದಿಲ್ಲ. ಇದು ನಮ್ಮ ಜಮೀನು, ಉಚಿತವಾಗಿ ನೀಡಲು ಸಾಧ್ಯವಿಲ್ಲ ಎಂದು ಗದರಿದ್ದಾರೆ.
ಇದನ್ನೂಓದಿ: ಕರ್ತವ್ಯದ ವೇಳೆ ರೀಲ್ಸ್ ಮಾಡಿದರೇ ಮುಲಾಜಿಲ್ಲದೆ ಅಮಾನತುಗೊಳಿಸಲಾಗುವುದು – ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ
ಸದ್ಯ ಮಹಿಳೆಯರ ಆರೋಗ್ಯ ಸ್ಥಿರವಾಗಿದ್ದು, ಅವರನ್ನು ಆರೋಗ್ಯ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೈರಲ್ ವಿಡಿಯೋ ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಆರೋಪಿಗಳಲ್ಲಿ ಓರ್ವನನ್ನು ಬಂಧಿಸಿದ್ದು, ಇತರ ಇಬ್ಬರು ಇನ್ನೂ ಪರಾರಿಯಾಗಿದ್ದಾರೆ.
ಈ ಘಟನೆಯ ಬಗ್ಗೆ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿ ಜೈದೀಪ್ ಪ್ರಸಾದ್, ಇದು ಭೂ ವಿವಾದದ ಕುಟುಂಬ ವಿಷಯವಾಗಿದೆ ಎಂದು ಹೇಳಿದರು.