ಬೆಳಗಾವಿ: ಕಿತ್ತೂರು ತಾಲೂಕು ಪರಸನಟ್ಟಿ ಗ್ರಾಮದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚೆನ್ನಮ್ಮನ ಕಿತ್ತೂರು ತಾಲೂಕು ದೇಗಾಂವ ಗ್ರಾಮದ ನರೇಶ್ ಯಲ್ಲಪ್ಪ ಆಗಸರ (28) ಪರಸನಟ್ಟಿ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಇದನ್ನೂ ಓದಿ: ಗೂಗಲ್ ಮ್ಯಾಪ್ ಎಡವಟ್ಟು | ಸೇತುವೆಯಿಂದ ನದಿಗೆ ಬಿದ್ದ ಕಾರು, ಸ್ಥಳದಲ್ಲೇ ಮೂವರು ಸಾವು
ಕಳೆದ 20 ದಿನಗಳ ಹಿಂದೆ ರಜೆ ಮೇಲೆ ದೇಗಾಂವ ಗ್ರಾಮಕ್ಕೆ ಬಂದಿದ್ದರು. ರಜೆ ಮುಗಿಸಿ ನವೆಂಬರ್ 24ರಂದು ಸೇವಾ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು. ಆದರೆ ಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವಾರು ಸಂದೇಹಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಪಿಎಸ್ಐ ಪ್ರುವೀಣ ಗಂಗೋಳ, ಪ್ರವೀಣ ಕೋಟೆ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ನೋಡಿ: ಋತ್ವಿಕ್ ಕುಮಾರ್ ಘಟಕ್100- ಚಲನಚಿತ್ರೋದ್ಯಮಕ್ಕೆ ವಾಸ್ತವಿಕತೆ ಮತ್ತು ಸಾಮಾಜಿಕ ರಾಜಕೀಯ ದೃಷ್ಟಿಕೋನದ ಪ್ರೇರಣೆ