ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ- ಕೊಲೆ ಶಂಕೆ

ರಾಯಚೂರು: ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.  ಮಂಜುಳಾ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ.ಇಂದು ಬೆಳಗ್ಗೆ ಮೃತದೇಹ ಬೆಂಕಿಯಲ್ಲಿ ಸುಡುತ್ತಿರುವ ದೃಶ್ಯ ಕಂಡು ಬಂದಿದೆ.

ಹಟ್ಟಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್​ ಆಗಿ ಮೃತ ಮಹಿಳೆ ಕಾರ್ಯ ನಿರ್ವಹಿಸುತ್ತಿದ್ದರು. ಕೊಲೆ ಮಾಡಿ ಬೆಂಕಿ ಹಚ್ಚಿರಬಹುದು ಅಂತ ಶಂಕಿಸಲಾಗಿದೆ. ಮಂಜುಳಾ ಮನೆಯಿಂದ ಸ್ವಲ್ಪ ದೂರದಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗಿನ ಜಾವ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿದಾಗ ಇನ್ನೂ ಬೆಂಕಿ ಹೊತ್ತಿ ಉರಿಯುತ್ತಿತ್ತು.

ಇದನ್ನೂ ಓದಿ : ಚಿಕ್ಕಬಳ್ಳಾಪುರ: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ; ಭೀಕರ ಅಪಘಾತದಲ್ಲಿ 13 ಮಂದಿ ಸಾವು

ಕಳೆದ ಎರಡ್ಮೂರು ವರ್ಷಗಳ ಹಿಂದೆ ಮಹಿಳೆಯ ಪತಿ ಮೃತಪಟ್ಟಿದ್ದಾರೆ. ಮಾನಸಿಕ ಖಿನ್ನತೆಗೆ ಒಳಗಾಗಿ ಇಂದು ಬೆಳಗ್ಗೆ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಸಹೋದರ ದೂರು ನೀಡಿದ್ದಾರೆ. ದೂರಿನ ಆಧಾರ ಮೇಲೆ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹಟ್ಟಿ ಪೊಲೀಸರು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ವಿಡಿಯೋ ನೋಡಿಬನ್ನಿ ಮರದ ಮಹತ್ವ ಗೊತ್ತೆ ? ಬನ್ನಿ ಮರ ನಮ್ಮ ಬದುಕಿನ ಬಂಗಾರ!

Donate Janashakthi Media

Leave a Reply

Your email address will not be published. Required fields are marked *