ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಬಲಿ

ಮಡಿಕೇರಿ:-ಕೊಡಗು ಜಿಲ್ಲೆಯಲ್ಲಿ ಅನೆ ಮಾನವ ಸಂಘರ್ಷಕ್ಕೆ ಕೊನೆಯೇ ಇಲ್ಲದಂತೆ ಅಗಿದೆ.ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ವನ್ಯಜೀವಿಗಳ ಹಾವಳಿಯಿಂದ ತತ್ತರಿಸಿರುವ ಕೊಡಗು ಜಿಲ್ಲೆಯಲ್ಲಿ ಇತ್ತಿಚೀನ ದಿನಗಳಲ್ಲಿ ಕಾಡಾನೆಗಳ ಸಮಸ್ಯೆ ದಿನ ಕಳೆದಂತೆ ಹೆಚ್ಚಾಗುತ್ತಿದೆ.ಈ‌ ನಡುವೆ ಇಂದು ದಕ್ಷಿಣ ಕೊಡಗಿನಲ್ಲಿ ಕಾಡಾನೆಗಳ ಹಾವಳಿ ತಾರಕಕ್ಕೇರಿದೆ.

ಕಾಡಾನೆಯೊಂದರ ದಾಳಿಗೆ ಸಿಲುಕಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಚನ್ನಂಗೊಲ್ಲಿ ಗ್ರಾಮದಲ್ಲಿ ನಡೆದಿದೆ. ಚನ್ನಂಗೊಲ್ಲಿ ಗ್ರಾಮದ ಪೈಸಾರಿ ನಿವಾಸಿ ಜಾನಕಿ(52) ಎಂಬುವವರೇ ಸಾವನ್ನಪ್ಪಿರುವ ದುರ್ದೈವಿ. ಗ್ರಾಮದ ಬಳಿಯ ಕಾಫಿ ತೋಟವೊಂದರಲ್ಲಿ ಕಾರ್ಯನಿರ್ವಹಿಸಿ ಸಂಜೆ ಮನೆಗೆ ಮರಳುವ ಸಂದರ್ಭ ಕಾಡಾನೆ ದಿಢೀರ್ ದಾಳಿ ಮಾಡಿದೆ. ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಜಾನಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನು ಓದಿ :- ಭ್ರಷ್ಟ ನೌಕರರಿಗೆ ಕಾನೂನಿನ ಕುಣಿಕೆ: ಸುಪ್ರೀಂ ಕೋರ್ಟ್ ತೀರ್ಪು

ಕಾಫಿ ತೋಟಗಳಲ್ಲಿ ನೆಲೆ ನಿಂತಿರುವ ಕಾಡಾನೆಗಳನ್ನು ತಕ್ಷಣ ಅರಣ್ಯಕ್ಕೆ ಓಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.ಇನ್ನೂ ಈ ನಡುವೆ ಮೃತಪಟ್ಟ ಜಾನಕಿ ಮೃತದೇಹವನ್ನು ನೋಡಲು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಹಾಗೂ ವಿರಾಜಪೇಟೆ ಶಾಸನ ಎಎಸ್ ಪೋನ್ನಣ್ಣ ಬೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ. ಅಲ್ಲದೇ ಅರಣ್ಯ ಇಲಾಖೆಯ ಆದಿಕಾರಿಗಳಿಗೆ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಮೀಸಲು ಅರಣ್ಯ ಪ್ರದೇಶಕ್ಕೆ ಓಡಿಸುವ ಕಾರ್ಯಚರಣೆ ಮಾಡುವಂತೆ ಸೂಚನೆ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *