ಬೆಂಗಳೂರು: ಡಿಸೆಂಬರ್ 5ರಂದು ಯುವಕನೊಬ್ಬ ನಮ್ಮ ಮೆಟ್ರೊ ನೇರಳೆ ಮಾರ್ಗದ ಕೆಂಗೇರಿ ನಿಲ್ದಾಣದಲ್ಲಿ ಮೆಟ್ರೊ ರೈಲು ಬರುವಾಗ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು
ಸಾವಿಗೆ ಕಾರಣಗಳು ಇನ್ನಷ್ಟೇ ಗೊತ್ತಾಗಬೇಕಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವಿಜಯಪುರ ಮೂಲದ ಶಾಂತನಗೌಡ ಪಾಟೀಲ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಹಾವೇರಿ | ವಿಜ್ಞಾನ ವಸ್ತು ಪ್ರದರ್ಶನ : ಗಮನಸೆಳೆದ ವಿದ್ಯಾರ್ಥಿಗಳು ತಯಾರಿಸಿದ ವಿದ್ಯುತ್ ಚಾಲಿತ ಟ್ರ್ಯಾಕ್ಟರ್
ನೇರಳೆ ಮಾರ್ಗದ ರೈಲುಗಳು ಮೈಸೂರು ರಸ್ತೆ ಮೆಟ್ರೊ ನಿಲ್ದಾಣದವರೆಗೆ ಸಂಚರಿಸಿದ್ದವು. ಈ ಘಟನೆಯಿಂದ ಮೆಟ್ರೊ ಸಂಚಾರದಲ್ಲಿ ವ್ಯತ್ಯಾಯ ಉಂಟಾಗಿತ್ತು.
ಸದ್ಯ ಮತ್ತೆ ಚಲ್ಲಘಟ್ಟವರೆಗೆ ಮೆಟ್ರೊ ಸಂಚಾರ ಪುನರಾಂಭವಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಜ್ಞಾನಭಾರತಿ ಮತ್ತು ಚಲ್ಲಘಟ್ಟ ನಡುವಿನ ಮೆಟ್ರೋ ಸೇವೆಗಳು ಇಂದು ಬೆಳಿಗ್ಗೆ 09:40 ಗಂಟೆಯಿಂದ ಸಂಪೂರ್ಣವಾಗಿ ಪುನರ್ ಆರಂಭಿಸಲಾಗಿದೆ. ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲುಗಳು ಈಗ ಎಂದಿನಂತೆ ಸಂಚರಿಸುತ್ತಿವೆ ಎಂದು ತಿಳಿಸಿದೆ.
ಇದನ್ನೂ ನೋಡಿ: ಚಿನ್ನಯ್ಯನಿಗೆ ಷರತ್ತುಬದ್ಧ ಜಾಮೀನು!! ರೀ ಓಪನ್ ಆಗುತ್ತಾ ಸೌಜನ್ಯ ಕೇಸ್ ?!!v Janashakthi Media
