ಚಿತ್ರದರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುಖ್ಯ ಆರೋಪಿ ಚಿತ್ರದುರ್ಗ ಮುರುಘಾ ಮಠದ ಡಾ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯನ್ನು ಕಳೆದ ರಾತ್ರಿ ಬಂಧಿಸಿರುವ ಚಿತ್ರದುರ್ಗ ಪೊಲೀಸರು ಇದೀಗ ಎರಡನೇ ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣದ ಎರಡನೇ ಆರೋಪಿಯಾಗಿರುವ ಮಠದ ಹಾಸ್ಟೆಲ್ ವಾರ್ಡನ್ ರಶ್ನಿ ಅವರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದು, ವೈದ್ಯಕೀಯ ತಪಾಸಣೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಸಹಕಾರ ನೀಡಿದ ಆರೋಪ ವಾರ್ಡನ್ ರಶ್ಮಿ ಮೇಲಿದೆ. ಈ ಹಿನ್ನೆಲೆಯಲ್ಲಿ ವಾರ್ಡನ್ ರಶ್ನಿ ಅವರನ್ನ ಡಿವೈಎಸ್ಪಿ ಅನಿಲ್ ಅವರು ನಿನ್ನೆ(ಸೆ.01) ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಬಳಿಕ ಗುರುವಾರ ರಾತ್ರಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿತ್ತು.
ಇದೀಗ ಎ-1 ಆರೋಪಿಯಾಗಿರುವ ಶಿವಮೂರ್ತಿ ಶಿವಾಚಾರ್ಯ ಶರಣರ ಬಂಧನದ ಬೆನ್ನಲ್ಲೇ ಎ-2 ಆರೋಪಿ ರಶ್ನಿ ಅವರನ್ನು ಸಹ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವೈದ್ಯಕೀಯ ತಪಾಸಣೆ ಮಾಡಿಸಿ ಬಳಿಕ ಅವರನ್ನು ನ್ಯಾಯಾಲಕ್ಕೆ ಹಾಜರುಪಡಿಸುವ ಸಾಧ್ಯತೆಗಳಿವೆ. ಒಟ್ಟು ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದು ಮೂವರು ಆರೋಪಿಗಳು ಕಾಣೆಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಮುರುಘಾ ಸ್ವಾಮೀಜಿಗೆ ಎದೆ ನೋವು : ಜಿಲ್ಲಾಸ್ಪತ್ರೆಗೆ ಶಿಫ್ಟ್! ಬೆಂಗಳೂರಿಗೆ ಸ್ಥಳಾಂತರ ಸಾಧ್ಯತೆ?
ಏನಿದು ಪ್ರಕರಣ?:
ಕಳೆದ ವಾರ ಮುರುಘಾ ಸ್ವಾಮೀಜಿ ವಿರುದ್ಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಮಠದ ಶಾಲೆಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯಿರಿಂದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬ ಕಾರಣ ನೀಡಿ ಮೈಸೂರಿನಿಂದ ಚಿತ್ರದುರ್ಗಕ್ಕೆ ಪ್ರಕರಣದ ವಿಚಾರಣೆಯನ್ನು ಹಸ್ತಾಂತರಿಸಲಾಗಿತ್ತು. ಅದಾದ ನಂತರ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದ ಬಳಿಕ ಮುರುಘಾ ಸ್ವಾಮೀಜಿಯನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದರು. ಪ್ರಕರಣ ದಾಖಲಾಗಿ ವಾರ ಕಳೆದರೂ ಬಂಧನವಾಗದಿರುವುದಕ್ಕೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಹ ಶ್ರೀಗಳ ಪರ ಹೇಳಿಕೆ ನೀಡಿದ್ದರು. ಇದಕ್ಕೂ ಆಕ್ರೋಶ ಕೇಳಿ ಬಂದಿತ್ತು. ಸದ್ಯ ಆಸ್ಪತ್ರೆಯಲ್ಲಿರುವಸ್ವಾಮೀಜಿಗೆ 14 ದಿನಗಳ ನ್ಯಾಯಾಂಗ ಬಂಧನವಾಗಿದೆ.