ಪ್ಯಾನ್ – ಆಧಾರ್ ಲಿಂಕ್ ಮಾಡದಿದ್ದಕ್ಕೆ ದಂಡ ಕಟ್ಟಿದ ಬಡಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು!

ಬೆಂಗಳೂರು: ಆಧಾರ್ ಕಾರ್ಡನ್ನು ಪಾನ್ ಕಾರ್ಡ್ ನೊಂದಿಗೆ ಜೋಡಣೆಗೆ ನೀಡಿದ್ದ ಗಡುವು ಮೀರಿ ವಿಳಂಬದ ಕಾರಣಕ್ಕೆ ದಂಡದೊಂದಿಗೆ ಆಧಾರ್ -ಪಾನ್ ಲಿಂಕ್ ಮಾಡಿದ ಬಡವರಿಗೆ ಸಂಕಷ್ಟ ಎದುರಾಗಿದೆ.

ಬಿಪಿಎಲ್‌ ಕಾರ್ಡ್‌ಗಳ ಅರ್ಹತೆ ಮರು ಪರಿಶೀಲಿಸುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ನಿರ್ದೇಶನ ನೀಡಿದೆ. ಪಾನ್‌ ಕಾರ್ಡ್‌ ಆಧಾರ್‌ ಜತೆ ಲಿಂಕ್‌ ಮಾಡಲು ಸೂಚನೆ ನೀಡಲಾಗಿತ್ತು. ಅಂತಿಮ ಗಡು ಮುಗಿದ ಬಳಿಕ ಲಿಂಕ್‌ ಮಾಡಿಸಿದವರು 1 ಸಾವಿರ ರೂ. ದಂಡವನ್ನು ಆದಾಯ ತೆರಿಗೆ ಇಲಾಖೆಗೆ ಆನ್‌ಲೈನ್‌ನಲ್ಲಿಪಾವತಿ ಮಾಡಿದ್ದರು. ಒಂದು ಸಾವಿರ ರೂಪಾಯಿ ದಂಡದ ಮೊತ್ತ ಆದಾಯ ತೆರಿಗೆ ಇಲಾಖೆಗೆ ಪಾವತಿಸಿ ಪಾನ್ -ಆಧಾರ್ ಕಾರ್ಡ್ ಜೋಡಣೆ ಮಾಡಿದವರನ್ನು ಆದಾಯ ತೆರಿಗೆ ಪಾವತಿದಾರರು ಎನ್ನುವ ಪಟ್ಟಿಗೆ ಸೇರ್ಪಡೆ ಮಾಡಲಾಗಿದ್ದು, ಇದನ್ನೇ ಆಧಾರವಾಗಿಟ್ಟುಕೊಂಡ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ.

ಆಹಾರ ಇಲಾಖೆ ರಾಜ್ಯದಲ್ಲಿ 1,06,152 ಆದಾಯ ತೆರಿಗೆ ಪಾವತಿದಾರರು ಹೊಂದಿದ ಅನರ್ಹ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ರದ್ದು ಪಡಿಸಲು ಮುಂದಾಗಿದೆ. ಆದರೆ, ಇದರಲ್ಲಿ ಅರ್ಧಕ್ಕೂ ಅಧಿಕ ಮಂದಿ ಬಡವರು ಇದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸ್ನೇಹಮಯಿ ಕೃಷ್ಣ ಬ್ಲ್ಯಾಕ್ಮೇಲರ್, ರೌಡಿ ಶೀಟರ್: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪ

ಬಿಪಿಎಲ್ ಕಾರ್ಡ್ ನಿಂದ ವಂಚಿತರಾದ ಬಡವರಿಗೆ ಆದಾಯ ತೆರಿಗೆ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ(NOC) ತರುವಂತೆ ಆಹಾರ ಇಲಾಖೆ ಅಧಿಕಾರಿಗಳು ಸೂಚಿಸುತ್ತಿದ್ದು, ಹೀಗಾಗಿ ಬಡವರು ಐಟಿ ಕಚೇರಿಗೆ ಅರ್ಜಿ ಸಲ್ಲಿಸಿ ಎನ್‌ಒಸಿ ಕೊಡುವಂತೆ ಮನವಿ ಮಾಡುತ್ತಿದ್ದಾರೆ. ಬಿಪಿಎಲ್ ಕಾರ್ಡ್ ಗಳು ರದ್ದಾಗಿರುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪಡಿತರ ಕೂಡ ಸಿಗುತ್ತಿಲ್ಲ. ಗೃಹಲಕ್ಷ್ಮಿ ಹಣ ನಿಂತುಹೋಗಿದೆ.

ಅನ್ನಭಾಗ್ಯದ ಅಕ್ಕಿ, ಹೆಚ್ಚುವರಿ ಅಕ್ಕಿ ಹಣ ಕೂಡ ಸಿಗುತ್ತಿಲ್ಲ. ಮನೆ ನಿರ್ಮಾಣಕ್ಕೆ ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗೆ 1 ಸಾವಿರ ರೂ. ದಂಡ ಪಾವತಿಸಿ ಆಧಾರ್ -ಪಾನ್ ಕಾರ್ಡ್ ಜೋಡಣೆ ಮಾಡಿದ ಬಡವರು ಗ್ಯಾರಂಟಿ ಸೇರಿ ಹಲವು ಸೌಲಭ್ಯಗಳನ್ನು ಕಳೆದುಕೊಳ್ಳುವಂತಾಗಿದೆ ಎಂದು ಹೇಳಲಾಗಿದೆ.

ಆದಾಯ ಇಲಾಖೆಯಿಂದ ಹಿಂಬರಹ

ಪಾನ್‌-ಆಧಾರ್‌ ಲಿಂಕ್‌ ಸಂದರ್ಭ ದಂಡ ಕಟ್ಟಿದವರನ್ನು ಆದಾಯ ತೆರಿಗೆ ಪಾವತಿದಾರರು ಎಂದು ಪರಿಗಣಿಸಿ ಪಟ್ಟಿ ಮಾಡಲಾಗಿದ್ದರೂ, ಅಂಥವರು ದಂಡ ಪಾವತಿ ಹೊರತಾಗಿ ಬೇರಾವುದೇ ಆದಾಯ ತೆರಿಗೆ ಪಾವತಿ ಮಾಡಿಲ್ಲಎಂಬ ಹಿಂಬರಹವನ್ನು ಆದಾಯ ತೆರಿಗೆ ಇಲಾಖೆಯಿಂದ ಆಹಾರ ಇಲಾಖೆ ಪಡೆಯುತ್ತಿದೆ. ಈ ಮೂಲಕ ಗೃಹಲಕ್ಷ್ಮೇ ದುಡ್ಡು ಈ ಕಾರಣಕ್ಕೆ ರದ್ದಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹ ಬಿಪಿಎಲ್‌ ಕಾರ್ಡ್‌ದಾರರಿಗೂ ಈ ಹಿಂಬರಹ ಅನುಕೂಲವಾಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ನೋಡಿ: ಪಿಚ್ಚರ್ ಪಯಣ 150 – ಭಾಗ 2 ಭಾರತದ ಪ್ರಾಪಗ್ಯಾಂಡ ಸಿನಿಮಾ:ಒಂದು ಇಣುಕು ನೋಟ – ಕೆ.ಫಣಿರಾಜ್ಮ ಶ್ರೀ ಮುರಳಿ ಮಾತುಕತೆ

Donate Janashakthi Media

Leave a Reply

Your email address will not be published. Required fields are marked *