ಬೆಂಗಳೂರು : ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದು, ನಾಳೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಭಾಸ್ಕರ್ ರಾವ್ ಅವರು ನಾಳೆ ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿರುವ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಆಪ್ ಗೆ ಸೇರ್ಪಡೆಯಾಗಲಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಅವರು ಆಪ್ ಗೆ ಸೇರ್ಪಡೆಯಾಗಲಿದ್ದಾರೆ. ಆಪ್ ಸೇರ್ಪಡೆ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 1 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದೆ ಎಂದು ತಿಳಿದು ಬಂದಿದೆ.
ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990 ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ಪೊಲೀಸ್ ಅಧಿಕಾರಿ ಆಗಿ ವೃತ್ತಿಜೀವನ ಅಂತ್ಯಗೊಂಡಿರುವ ಬಗ್ಗೆ, ಹೊಸಪಯಣದ ಕುರಿತು ನಿನ್ನೆಯಷ್ಟೇ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದರು.