ಆಪರೇಷನ್‌ ಕಮಲ | ಎಎಪಿ ಶಾಸಕ ಕರ್ತಾರ್ ಸಿಂಗ್, ಮಾಜಿ ಸಚಿವ ರಾಜ್‌ಕುಮಾರ್ ಬಿಜೆಪಿ ಸೇರ್ಪಡೆ

ನವದೆಹಲಿ: ದಕ್ಷಿಣ ದೆಹಲಿಯ ಛತ್ತರ್‌ಪುರ ಕ್ಷೇತ್ರದ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಕರ್ತಾರ್ ಸಿಂಗ್ ತನ್ವಾರ್, ದೆಹಲಿಯ ಮಾಜಿ ಸಚಿವ ರಾಜ್ ಕುಮಾರ್ ಆನಂದ್, ಪಟೇಲ್ ನಗರದ ಮಾಜಿ ಶಾಸಕಿ ವೀಣಾ ಆನಂದ್ ಅವರು ಇಂದು (ಬುಧವಾರ) ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿಯ ದೆಹಲಿ ಘಟಕದ ಅಧ್ಯಕ್ಷ ವೀರೇಂದ್ರ ಸಿಂಗ್‌ ಸಚ್‌ದೇವ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಇಂದು ಎಎಪಿಯ ಮಾಜಿ ಸಚಿವ ರಾಜ್‌ ಕುಮಾರ್‌ ಆನಂದ್‌ ಹಾಗೂ ಕರ್ತಾರ್‌ ಸಿಂಗ್‌ರನ್ನು  ಪಕ್ಷಕ್ಕೆ ಬರಮಾಡಿಕೊಂಡರು.

ಈ ಇಬ್ಬರು ನಾಯಕರ ಜೊತೆ ದಕ್ಷಿಣ ದೆಹಲಿಯ ಸೈದ್-ಉಲ್-ಅಜೈಬ್ ವಾರ್ಡ್‌ನ ಎಎಪಿ ಕೌನ್ಸಿಲರ್ ಉಮೇದ್ ಸಿಂಗ್ ಫೋಗಟ್ ಹಾಗೂ ಇತರೆ ಇಬ್ಬರು ಎಎಪಿ ಸದಸ್ಯರು ಬಿಜೆಪಿಗೆ ಸೇರಿದ್ದಾರೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಜೈಲು ಸೇರಿದ್ದರೆ, ಇತ್ತ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಆರೋಪಿಸಿ ಎಎಪಿ ನಾಯಕರು ಪಕ್ಷವನ್ನು ತೊರೆದಿದ್ದಾರೆ ಎಂದು ತಿಳಿದು ಬಂದಿದೆ.

 

Donate Janashakthi Media

Leave a Reply

Your email address will not be published. Required fields are marked *