ಮೆಟ್ರೋ ದರ ಹೆಚ್ಚಳ ವಿರುದ್ಧ ಆಪ್ ತೀವ್ರ ವಿರೋಧ

ಬೆಂಗಳೂರು: ಕಳೆದ ಏಳೆಂಟು ವರ್ಷಗಳಿಂದ ಮೆಟ್ರೋ ದರವನ್ನು ಏರಿಸಿಲ್ಲವೆಂಬ ಕಾರಣವನ್ನು ನೀಡಿ ಏಕಾಏಕಿ 40 ರಿಂದ 45 % ದರ ಏರಿಕೆ ಮಾಡುತ್ತಿರುವ ಬಿ ಎಂ ಆರ್ ಸಿ ಎಲ್ ಕ್ರಮವನ್ನು ಅಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಹಾಗೂ ಇದರ ವಿರುದ್ಧ ಬೆಂಗಳೂರಿನ ನಾಗರೀಕರ ಜೊತೆಗೂಡಿ ಹೋರಾಟದ ಹಾದಿಯನ್ನು ಹಿಡಿಯಬೇಕಾಗುತ್ತದೆ ಎಂದು ಪಕ್ಷದ ರಾಜ್ಯ ಖಜಾಂಚಿ ಪ್ರಕಾಶ್ ನೆಡುಂಗಡಿ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಂಚಾರ ಒತ್ತಡ ಸಮಸ್ಯೆಯಲ್ಲಿ ವಿಶ್ವ ಮಟ್ಟದಲ್ಲಿ ಮೂರನೇ ಸ್ಥಾನವನ್ನು ಪಡೆದು , ಬೆಂಗಳೂರಿನ ಆರ್ಥಿಕ ವ್ಯವಸ್ಥೆಗೆ ಧಕ್ಕೆ ಬರುವ ರೀತಿಯ ಕಳಂಕವನ್ನು ಹೊತ್ತಿರುವ ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸಮೂಹ ಸಾರಿಗೆ ವ್ಯವಸ್ಥೆಗಳನ್ನು ಮತ್ತಷ್ಟು ಬಲಪಡಿಸಿ ಸಂಚಾರ ಒತ್ತಡವನ್ನು ಕಡಿಮೆ ಮಾಡುವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳದೆ ಈ ರೀತಿ ದರ ಏರಿಸುವ ವಿರುದ್ಧ ಸಮೂಹ ಸಾರಿಗೆ ವ್ಯವಸ್ಥೆಯ ಕತ್ತುಹಿಸುಕುವ ಕೆಲಸಗಳನ್ನು ಮಾಡಬಾರದು. ಈಗಾಗಲೇ ರಾಜ್ಯ ಸರ್ಕಾರ ಕೆಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ಬಸ್ ಗಳ ಬೆಲೆಗಳನ್ನು ಏರಿಸಿ ಜನತೆಯ ಜೇಬಿಗೆ ಬರೆ ಎಳೆದಿದ್ದಾರೆ.

ಇದನ್ನೂ ಓದಿ: ಅರಮನೆಯ ವ್ಯಾಪ್ತಿಯಲ್ಲಿ ಖಾಯಂ ಕಟ್ಟಡ ನಿರ್ಮಿಸಿರುವ ಮಹಾರಾಜರ ಉತ್ತರಾಧಿಕಾರಿಗಳ ಮೇಲೆ ನ್ಯಾಯಾಂಗದ ನಿಂದನೆ ಅರ್ಜಿಯನ್ನು ಸಲ್ಲಿಸಲು ಸಚಿವ ಸಂಪುಟ ನಿರ್ಧರ

ದೆಹಲಿಯಲ್ಲಿ ಎಎಪಿ ಸರ್ಕಾರ ಈಗಾಗಲೇ ವಿದ್ಯಾರ್ಥಿಗಳಿಗೆ ಮೆಟ್ರೋಗಳಲ್ಲಿಯೂ ಸಹ ಉಚಿತ ಸಾರಿಗೆ ವ್ಯವಸ್ಥೆಯನ್ನು ಮಾಡಿರುವ ಸಂದರ್ಭದಲ್ಲಿ ಇದೇ ರೀತಿಯ ಪ್ರೋತ್ಸಾಹಗಳನ್ನು ನೀಡುವುದನ್ನು ಬಿಟ್ಟು ರಾಜ್ಯ ಸರ್ಕಾರವು ಈ ರೀತಿ ಏಕಾಏಕಿ ಬೆಲೆ ಏರಿಸುವುದು ಸರಿಯಾದ ಕ್ರಮವಲ್ಲ.

ಸರ್ಕಾರವು ಸಾರ್ವಜನಿಕ ಸಂಚಾರ ವ್ಯವಸ್ಥೆಯನ್ನು ಲಾಭದಾಯಕ ಹಾಗೂ ವ್ಯಾಪಾರಿ ದೃಷ್ಟಿಯಿಂದ ನೋಡುವುದನ್ನು ಬಿಡಬೇಕು. ಜನಸ್ನೇಹಿ ಸಾರಿಗೆ ವ್ಯವಸ್ಥೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಮುಂದಾಗಬೇಕು. ಕೂಡಲೇ ದರ ಏರಿಕೆಯ ಪ್ರಸ್ತಾಪವನ್ನು ಕೈಬಿಡಬೇಕು ಇಲ್ಲದಿದ್ದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮೆಟ್ರೋ ಸಂಸ್ಥೆ ಹಾಗೂ ಸರ್ಕಾರದ ವಿರುದ್ಧ ತೀವ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಪ್ರಕಾಶ್ ನೆಡುಂಗಡಿ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ಇದನ್ನೂ ನೋಡಿ: ಕಂದಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ : ತಡೆಗಟ್ಟುವಲ್ಲಿ ಸಮಾಜವೂ ವಿಫಲ, ಸರ್ಕಾರವೂ ವಿಫಲ Janashakthi Media

Donate Janashakthi Media

Leave a Reply

Your email address will not be published. Required fields are marked *