ಬೆಂಗಳೂರು: ನಗರದ ಲುಲು ಮಾಲ್ನಲ್ಲಿ ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋ ಪ್ರಸಾರವಾಗಿತ್ತು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಇದೀಗ ವೀಡಿಯೊ ದೃಶ್ಯ ಆಧರಿಸಿ ಆರೋಪಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಸವೇಶ್ವರನಗರ ನಿವಾಸಿ ಅಶ್ವಥ್ ನಾರಾಯಣ್ (60) ಆರೋಪಿ. ಮೂರು ದಿನಗಳ ಹಿಂದೆ ಲುಲು ಮಾಲ್ ನಲ್ಲಿ ಯವತಿಯರ ಜೊತೆ ಅಸಭ್ಯವಾಗಿ ಅಶ್ವಥ್ ನಾರಾಯಣ್ ವರ್ತಿಸಿದ್ದ. ಈ ವೇಳೆ ಯುವಕ ಯಶವಂತ್ ವೀಡಿಯೊ ಚಿತ್ರೀಕರಿಸಿದ್ದ. ಬೆಂಗಳೂರು
ಇದನ್ನೂ ಓದಿ:ಬುರ್ಖಾ ಧರಿಸಿ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟ ಆರೋಪಿ ಅಭಿಮನ್ಯು ಬಂಧನ