ಭ್ರಷ್ಟಾಚಾರ ಆರೋಪ: ಬಿಜೆಪಿ ಶಾಸಕ ಅಭಯ ಪಾಟೀಲ ವಿಚಾರಣೆಗೊಳಪಡಿಸಲು ಎಸಿಬಿ ಕೋರಿಕೆ

ಬೆಳಗಾವಿ : ಬೆಳಗಾವಿ ದಕ್ಷಿಣ ಮತ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ವಿರುದ್ಧ ಮಾಡಲಾದ ಭ್ರಷ್ಟಾಚಾರ ಆರೋಪದ ಕುರಿತು ವಿಚಾರಣೆಗೊಳಪಡಿಸಲು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಎಸಿಬಿ ಡಿವೈಎಸ್‌ಪಿ ಜೆ.ಎಂ.ಕರುಣಾಕರ ಶೆಟ್ಟಿ ಈ ಸಂಬಂಧ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿದ್ದಾರೆ.

ಶಾಸಕ ಭ್ರಷ್ಟಾಚಾರ ಎಸಗಿದ್ದಾರೆ. ಅಪಾರ ಆಸ್ತಿ ಕಬಳಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಸುಜಿತ್​​ ಮುಳಗುಂದ 2012ರಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. 2017ರಲ್ಲಿ ಪ್ರಕರಣ ಎಸಿಬಿಗೆ ವರ್ಗಾವಣೆಯಾಗಿತ್ತು.

ಶಾಸಕ ಅಭಯ ಪಾಟೀಲ ವಿರುದ್ಧ ತನಿಖೆ ಪೂರ್ಣಗೊಂಡಿದ್ದು, ವಿಚಾರಣೆಗೆ ಒಳಪಡಿಸುವ ಸಲುವಾಗಿ ಚಾರ್ಜ್ ಶೀಟ್ ಸಲ್ಲಿಸಲು ಅನುಮತಿ ನೀಡಬೇಕು ಎಂದು ಪೂರ್ವಾನುಮತಿ ಸಭಾಧ್ಯಕ್ಷರಿಗೆ ಸಲ್ಲಿಸಿದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಎಸಿಬಿ ತನಿಖೆಯ ಸಂದರ್ಭದಲ್ಲಿ ತನಿಖಾಧಿಕಾರಿಗಳು ತಕ್ಷಣವೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ತನಿಖೆ ಪೂರ್ಣಗೊಳಿಸಿದ್ದಾರೆ. ಶಾಸಕ ಅಭಯ್ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಕೋರಿದ್ದಾರೆ. ಜೂನ್ 20 ಕ್ಕೆ ಪತ್ರ ಬರೆಯಲಾಗಿದ್ದು, ಈವರೆಗೆ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಪ್ರತಿಕ್ರಿಯೆ ಬಂದಿಲ್ಲ.

Donate Janashakthi Media

Leave a Reply

Your email address will not be published. Required fields are marked *