ರಾಷ್ಟ್ರಪತಿಗಳಿಂದ ವೀರಚಕ್ರ ಪ್ರಶಸ್ತಿ ಸ್ವೀಕರಿಸಿದ ಅಭಿನಂದನ್ ವರ್ಧಮಾನ್​​

ನವದೆಹಲಿ: ವೈಮಾನಿಕ ಯುದ್ಧದಲ್ಲಿ ಪಾಕಿಸ್ತಾನದ ಎಫ್ -16 ಯುದ್ಧ ವಿಮಾನವನ್ನು 2019ರ ಫೆಬ್ರವರಿ 27ರಂದು ಹೊಡೆದುರುಳಿಸಿದ್ದಕ್ಕಾಗಿ ವಿಂಗ್ ಕಮಾಂಡರ್ (ಈಗ ಗ್ರೂಪ್ ಕ್ಯಾಪ್ಟನ್) ಅಭಿನಂದನ್ ವರ್ಧಮಾನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು.

ಪುಲ್ವಾಮಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ವಾಯುಪಡೆಗಳ ನಡುವಿನ ವೈಮಾನಿಕ ಚಕಮಕಿಯಲ್ಲಿ ಅಭಿನಂದನ್‌ ವರ್ಧಮಾನ್ ಪಾಕಿಸ್ತಾನದ ಯುದ್ಧವಿಮಾನದೊಂದಿಗೆ ಯುದ್ಧದಲ್ಲಿ ತೊಡಗಿದ್ದರು. ಎಫ್-16 ಅನ್ನು ಹೊಡೆದುರುಳಿಸಿದ ನಂತರ ವರ್ಧಮಾನ್ ಅವರ ಎಂಐಜಿ-21 ಯುದ್ಧ ವಿಮಾನ ಪಾಕ್ ಭೂಪ್ರದೇಶದಲ್ಲಿ ಇಳಿದಾಗ ಅವರನ್ನು ಪಾಕಿಸ್ತಾನ ಸೇನೆ ವಶಕ್ಕೆ ತೆಗೆದುಕೊಂಡಿತು.

ಈ ವಿಷಯದಲ್ಲಿ ಅಂತರರಾಷ್ಟ್ರೀಯ ಹಸ್ತಕ್ಷೇಪದ ಜೊತೆಗೆ ಭಾರತದ ಕಡೆಯಿಂದ ಹೇರಿದ ವ್ಯಾಪಕ ಒತ್ತಡದಿಂದಾಗಿ ಪಾಕಿಸ್ತಾನದ ಸೇನೆಯು ಅವರನ್ನು ಬಿಡುಗಡೆ ಮಾಡಿತು.

ಇತ್ತೀಚಿನ ದಿನಗಳಲ್ಲಿ ಐಎಎಫ್‌ನ ಅತ್ಯಂತ ಪ್ರಸಿದ್ಧ ಅಧಿಕಾರಿಗಳಲ್ಲಿ ಒಬ್ಬರಾಗಿರುವ ವರ್ಧಮಾನ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಕ್ಕಾಗಿ ಸಪ್ಪರ್ ಪ್ರಕಾಶ್ ಜಾಧವ್ ಅವರಿಗೆ ಎರಡನೇ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿ ಕೀರ್ತಿ ಚಕ್ರ(ಮರಣೋತ್ತರ), ಐವರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಕಾರ್ಯಾಚರಣೆಯಲ್ಲಿನ ಪಾತ್ರಕ್ಕಾಗಿ ಮೇಜರ್ ವಿಭೂತಿ ಶಂಕರ್ ಧೌಂಡ್ಯಾಲ್ ಅವರಿಗೆ ಶೌರ್ಯ ಚಕ್ರ (ಮರಣೋತ್ತರ) ನೀಡಲಾಗುವುದು.  ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕನನ್ನು ಕೊಂದಿದ್ದಕ್ಕಾಗಿ ನೈಬ್ ಸುಬೇದಾರ್ ಸೋಂಬಿರ್ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರವನ್ನು ನೀಡಲಾಗಿದೆ.

Donate Janashakthi Media

Leave a Reply

Your email address will not be published. Required fields are marked *