ಸಚಿವರಿಗೆ ಹೊಸ ಕಾರು ಭಾಗ್ಯ| ಸುಮಾರು 10 ಕೋಟಿ ರೂ. ವೆಚ್ಚದಲ್ಲಿ 33 ಇನ್ನೋವಾ ಖರೀದಿ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 100 ದಿನಗಳಲ್ಲಿ ರಾಜ್ಯದ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರೆಂಟಿ ಯೋಜನೆಗಳನ್ನು ಈಡೇರಿಸಿದ್ದು, ಈಗ ಎಲ್ಲ ಸಚಿವರಿಗೆ ಹೊಸ ಕಾರುಗಳ ಭಾಗ್ಯ ನೀಡಲಾಗಿದೆ.

ರಾಜ್ಯದಲ್ಲಿ ಉತ್ತಮ ಮಳೆಯಾಗದೇ ಭೀಕರ ಬರಗಾಲ ತಾಂಡವವಾಡುತ್ತಿದ್ದು, ಮಳೆ ಬೆಳೆಯಿಲ್ಲದೇ ರೈ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಅಲ್ಲದೇ ಅಭಿವೃದ್ಧಿ ಕೆಲಸಗಳು ಮಂದಗತಿಯಲ್ಲಿ ಸಾಕುತ್ತಿದೆ. ಅದರೆ ರಾಜ್ಯ ಸರ್ಕಾರ ಮಾತ್ರ ದಸರಾ ಹಬ್ಬಕ್ಕೆ ಸಂಪುಟದ ಸಚಿವರಿಗೆ ಭರ್ಜರಿ ಹೂಸ ಇನೋವಾ ಕಾರುಗಳನ್ನು ಉಡುಗೊರೆಯಾಗಿ ನೀಡಿದೆ.

ಇದನ್ನೂ ಓದಿ:Satish Jarkiholi| ಕಾಂಪ್ರಮೈಸ್ ಆಗಿದ್ದೇನೆ ಅಂತ ನಾನು ವೀಕ್ ಅಲ್ಲ; ಸಚಿವ ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಉತ್ತಮ ಮಳೆಯಾಗದೇ ಇತ್ತ ಗ್ಯಾರೆಂಟಿ ಯೋಜನೆಗಳಿಂದಾಗಿ ಎಲ್ಲಾ ಇಲಾಖೆಯಲ್ಲೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ವಿಪಕ್ಷಗಳು ಸರಣಿ ಆರೋಪಗಳನ್ನು ಮಾಡುತ್ತಿದ್ದು, ಭೀಕರ ಬರಗಾಲದ ನಡುವೆ ಸಚಿವರಿಗೆ ಹೊಸ ಇನೋವಾ ಹೈಬ್ರಿಡ್ ಹಲುಗಳನ್ನು ಖರೀದಿಸಿ ಅದನ್ನು ವಿಧಾನಸೌಧದ ಮುಂದೆ ಸಾಲಾಗಿ ನಿಲ್ಲಿಸಿರುವ ವಿಡಿಯೋ ವೈರಲ್ ಆಗಿದೆ.

ರಾಜ್ಯ ಸರ್ಕಾರ 9.9 ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಎಲ್ಲಾ 33 ಸಚಿವರಿಗೆ ಶೀಘ್ರದಲ್ಲೇ ಇತ್ತೀಚೆಗೆ ಬಿಡುಗಡೆಯಾದ ಟೊಯೊಟಾ ಇನ್ನೋವಾ ಹೈಬ್ರಿಡ್ ಹೈಕ್ರಾಸ್ ಮಾಡೆಲ್ನ 33 ಕಾರುಗಳನ್ನು ಖರೀದಿಸಲು ಮುಂದಾಗಿದೆ.

ಸಿದ್ದರಾಮಯ್ಯ ಸಂಪುಟದ ಎಲ್ಲ ಸಚಿವರಿಗೂ ತಲಾ 30 ಲಕ್ಷ ರೂ. ಬೆಲೆಯ ಹೊಸ ಇನ್ನೋವಾ ಹೈಕ್ರಾಸ್‌-ಹೈಬ್ರಿಡ್‌ ಕಾರುಗಳ ಖರೀದಿಗೆ ಸರ್ಕಾರ ಅನುಮತಿ ನೀಡಿದ್ದು, ಇದಕ್ಕೆ 4ಜಿ ವಿನಾಯಿತಿ ನೀಡಿ 9.90 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ವಿಡಿಯೋ ನೋಡಿ:ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ನಲ್ಲಿ ಶಾಂತಿ ನೆಲೆಸಲಿ ಎಂದವರನ್ನು ಬಂಧಿಸಿದ ಸರ್ಕಾರ! Janashakthi Media

Donate Janashakthi Media

Leave a Reply

Your email address will not be published. Required fields are marked *