ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ: ಐಎಂಡಿ ಸೂಚನೆ

ಬೆಂಗಳೂರು: ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಮುಂದಿನ ನಾಲ್ಕು ವಾರಗಳಲ್ಲಿ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ, ಮಲೆನಾಡು ಮತ್ತು ರಾಜ್ಯದ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಐಎಂಡಿ ಸೂಚನೆ ನೀಡಿದೆ. ಕರ್ನಾಟಕ

ರಾಜ್ಯದಲ್ಲಿ ಐಎಂಡಿ ಮೂಲಗಳ ಪ್ರಕಾರ ಜೂನ್ 1ರಿಂದ ಆಗಸ್ಟ್ 1 6, 2024 ರವರೆಗೆ ಸಾಮಾನ್ಯ 580.2 mmಗೆ ಹೋಲಿಸಿದರೆ 700.6 mm ಮಳೆಯಾಗಿದೆ. ರಾಜ್ಯದ ಸಿರುಗುಪ್ಪ, ದೇವದುರ್ಗ, ಔರಾದ್, ಬೀದರ್, ಕಮಲನಗರ, ಹುಬ್ಬಳ್ಳಿ, ಶಹಾಪುರ, ಯಾದಗಿರಿ ತಾಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು, ಮುಂದಿನ ವಾರಗಳಲ್ಲಿ ಈ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

ಅಧಿಕಾರಿಗಳೊಂದಿಗೆ ಸಿಎಂ ಸಭೆ ಒಟ್ಟು 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ರಾಜ್ಯದಾದ್ಯಂತ ಅಂದಾಜು 81,589 ಹೆಕ್ಟೇರ್‌ನಲ್ಲಿ ಬೆಳೆದ ಬೆಳೆ ಮಳೆಯಿಂದಾಗಿ ಹಾನಿಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಚಿವ ಕೃಷ್ಣಬೈರೇಗೌಡ, ಕಂದಾಯ ಹಾಗೂ ಕೃಷಿ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಇದನ್ನೂ ಓದಿ: ಸುರತ್ಕಲ್ ಬೀದಿಬದಿ ವ್ಯಾಪಾರಸ್ಥರ ವಲಯ ಸಮಾವೇಶ

ಈ ವೇಳೆ ರಾಜ್ಯದಲ್ಲಿನ ಮೂಲಸೌಕರ್ಯ, ಬೆಳೆ, ಮನೆಗಳಿಗೆ ಆಗಿರುವ ಹಾನಿಯ ಅವಲೋಕನ ಮಾಡಲಾಯಿತು. ಒಟ್ಟು 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಈ ಸಮೀಕ್ಷೆ ಪೂರ್ಣಗೊಂಡ ನಂತರ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲಾಗುವುದು ಎಂದು ಸಿಎಂ ಸಭೆಯಲ್ಲಿ ಹೇಳಿದರು. ಈ ಬಾರಿ ಭಾರೀ ಮಳೆಗೆ 67 ಮಂದಿ ಸಾವನ್ನಪ್ಪಿದ್ದು, 66 ಪ್ರಕರಣಗಳಲ್ಲಿ 3.29 ಕೋಟಿ ಪರಿಹಾರ ವಿತರಿಸಲಾಗಿದೆ.

ಬಿಬಿಎಂಪಿ ಅಲರ್ಟ್ ಬೆಂಗಳೂರಿನಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪ್ರತಿದಿನ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಲು ಮತ್ತು ಮಳೆ ಹಾನಿ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ವಲಯ ಆಯುಕ್ತರು ಮತ್ತು ಇಂಜಿನಿಯರ್‌ಗಳು ಎಚ್ಚೆತ್ತುಕೊಳ್ಳುವಂತೆ ಸೂಚಿಸಲಾಗಿದೆ. ಮಳೆ ಹಾನಿ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲು ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಇದನ್ನೂ ನೋಡಿ: GST ಕುರಿತು ಪ್ರಶ್ನೆ ಕೇಳಿದ ಉದ್ಯಮಿ; ಕ್ಷಮೆ ಕೇಳಿಸಿದರೇ ನಿರ್ಮಲಾ ಸೀತಾರಾಮನ್?Janashakthi Media

Donate Janashakthi Media

Leave a Reply

Your email address will not be published. Required fields are marked *