ಮುರುಘಾ ಮಠದ ಆಡಳಿತಾಧಿಕಾರಿಯಾಗಿ ಜಿಲ್ಲಾ ಪ್ರಧಾನ ನ್ಯಾಯಧೀಶೆ ಅಧಿಕಾರ ಸ್ವೀಕಾರ

ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗದ  ಬಂಧನದಲ್ಲಿದ್ದಾರೆ.ಹಾಗಾಗಿ ಮಾಜಿ ಐಎಎಸ್‌ ಅಧಿಕಾರಿ ಪಿ.ಎಸ್‌ ವಸ್ತ್ರದ್‌ ಅವರನ್ನು ಮಠದ ಆಡಳಿತ ನಿರ್ವಹಣೆಯ ಆಡಳಿತಾಧಿಕಾರಿಯಾಗಿ ಸರ್ಕಾರ ಆಯ್ಕೆಮಾಡಿತ್ತು.ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಆಡಿಳಿತಾಧಿಕಾರಿ ನೇಮಕವನ್ನು ರದ್ದುಪಡಿಸಿದ ಹೈಕೋರ್ಟ್‌ ಮಧ್ಯಂತರ ವ್ಯವಸ್ಥೆ ಮಾಡಿಕೊಳ್ಳಲು ಮಠದ ಭಕ್ತರಿಗೆ ಆರು ವಾರಗಳ ಕಾಲಾವಕಾಶ ನೀಡಿತ್ತು.ಈ ನಡುವೆ ಮಾಜಿ ಸಚಿವ ಎಚ್‌ ಏಕಾಂತಯ್ಯ ಆಡಳಿತಾಧಿಕಾರಿ ನೇಮಕಾತಿ ರದ್ದುಪಡಿಸಿದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.ಈ ಮೇಲ್ಮನವಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವಿರಾಸೇ ನೆತೃತ್ವದ ವಿಭಾಗೀಯ ಪೀಠ,ಮುರುಘಾ ಮಠದ ತಾತ್ಕಾಕಿಕ  ಆಡಳಿತಾಧಿಕಾರಿಯಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು.

ಇದನ್ನೂ ಓದಿ:ಮುರುಘಾ ಮಠದಿಂದ 22 ಮಕ್ಕಳು ನಾಪತ್ತೆ!

ಈ ಕುರಿತಾದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ವಿಭಾಗೀಯ ಪೀಠವು, ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಮಂಗಳವಾರ (ಜುಲೈ 04) ಬೆಳಗ್ಗೆ 11 ಗಂಟೆಗೆ ಮಠದ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಬೇಕು ಎಂದು ಸೂಚಿಸಿತ್ತು. ಈ ನಿಟ್ಟಿನಲ್ಲಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಎಂ ಅವರು ಮುರುಘಾ ಮಠದ ತಾತ್ಕಾಕಿಕ  ಆಡಳಿತಾಧಿಕಾರಿಯಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದರು.

 

Donate Janashakthi Media

Leave a Reply

Your email address will not be published. Required fields are marked *