ಚಿಕ್ಕಬಳ್ಳಾಪುರ: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ; ಭೀಕರ ಅಪಘಾತದಲ್ಲಿ 13 ಮಂದಿ ಸಾವು

ಚಿಕ್ಕಬಳ್ಳಾಪುರ: ಟಾಟಾ ಸುಮೊ‌ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 13 ಮಂದಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಇಂದು (ಅ.26) ಬೆಳಗಿನ ಜಾವ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯ ಮುಂದೆಯೇ ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೋ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಸುಮೋದಲ್ಲಿ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡಿದ್ದ ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಟಾ ಸುಮೋ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿತ್ತು. ಆದರೆ ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಇದರಿಂದ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಮಗು, ಮೂವರು ಮಹಿಳೆಯರು ಸೇರಿ 13 ಜನ ಮೃತಪಟ್ಟಿದ್ದಾರೆ. ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಮೃತರು ಆಂಧ್ರದ ಗೊರಂಟ್ಲ ನಿವಾಸಿಗಳು ಎನ್ನುವುದು ಗೊತ್ತಾಗಿದೆ. ಒಬ್ಬೊಬ್ಬರು ಒಂದೊಂದು ಊರಿನವರು ಎಂಬ ಮಾಹಿತಿ ಸಿಕ್ಕಿದೆ ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್​.ನಾಗೇಶ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ

ಇದನ್ನೂ ಓದಿಚಿಕ್ಕಬಳ್ಳಾಪುರದಲ್ಲಿ ಒಂದೇ ಕುಟುಂಬದ 65 ಜನ ಏಕಕಾಲಕ್ಕೆ ಮತದಾನ

2 ಲಕ್ಷ ಪರಿಹಾರ ಘೋಷಿಸಿದ ಸಿಎಂ :ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ  ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಸುದ್ದಿ ತಿಳಿದು ಅತೀವ ನೋವಾಯಿತು ಎಂದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಸಿಎಂ ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ

ಈ ವಿಡಿಯೋ ನೋಡಿ : ರಾಷ್ಟ್ರಗೀತೆ ಹಾಡುತ್ತಲೇ ಪ್ರಾಣ ತ್ಯಜಿಸಿದ ಹಿರಿಯ ಪತ್ರಕರ್ತ- ಚಿಕ್ಕೋಡಿಯಲ್ಲೊಂದು ದುರಂತ

 

 

Donate Janashakthi Media

Leave a Reply

Your email address will not be published. Required fields are marked *