ಬೆಂಗಳೂರಿನ ವಿನಾಯಕ ಚಿತ್ರಮಂದಿರ ಬಳಿ ಅಗ್ನಿ ಅವಘಡ: 8 ಮನೆಗಳು ಬೆಂಕಿಗಾಹುತಿ

ಬೆಂಗಳೂರು: ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವಘಡ

ಸೆ-18 ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಚಿತ್ರಮಂದಿರ ಬಳಿ ಇರುವ ಗೋದಾಮಿನಲ್ಲಿ ಅಗ್ನಿ ಅಪಘಾತ ಸಂಭವಿಸಿದ್ದು, ಗೋದಾಮು ಹಾಗೂ 8 ಶೀಟ್ ಮನೆಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಒಬ್ಬರಿಗೆ ಗಾಯಗಳಾಗಿದ್ದು, ವಿಷಯ ತಿಳಿದು ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಇದನ್ನೂ ಓದಿ:ಬೆಂಗಳೂರಿನ ದೇವರಚಿಕ್ಕನಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅಪಘಾತ ; ಹೊತ್ತಿ ಉರಿದ ಫ್ಲ್ಯಾಟ್‌

ಗೋದಾಮಿನಲ್ಲಿ ಎರಡು ಸಿಲಿಂಡರ್​ಗಳು ಸ್ಫೋಟಗೊಂಡು ಅಗ್ನಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದ್ದು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಗ್ನಿ ಅಪಘಾತದಲ್ಲಿ ಗಾಯೊಂಡಿರುವ ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.

ಇನ್ನು ಈ ಅಗ್ನಿ ಅಪಘಾತದ ಬಗ್ಗೆ ಪ್ರತ್ಯಕ್ಷದರ್ಶಿ ಸೈಯ್ಯದ್  ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸಾಕೆಟ್ ಬೋರ್ಡ್​ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಮಹಿಳೆಯರು ಬೆಂಕಿ ಹೊತ್ತಿದ್ದ ಬಗ್ಗೆ ಮನೆಯಿಂದ ಹೊರಗೆ ಓಡಿ ಬಂದು ನನಗೆ ಮಾಹಿತಿ ನೀಡಿದರು. ಅಷ್ಟರಲ್ಲಿ ಮನೆಯಲ್ಲಿದ್ದ ಸಿಲಿಂಡರ್​​ ಸ್ಫೋಟದ ಜೊತೆ ಬೆಂಕಿ ಹರಡಿತ್ತು. ತಕ್ಷಣ ಅಗ್ನಿಶಾಮಕ ಕಚೇರಿಗೆ ಕರೆ ಮಾಡಿ ಮಾಹಿತಿ ನೀಡಿದೆ. ಎಲ್ಲರೂ ಹೊರಗೆ ಓಡಿ ಬಂದಿದ್ದರಿಂದ ಯಾರಿಗೂ ಗಾಯಗಳಾಗಿಲ್ಲ ಎಂದು ಮಾಹಿತಿ ನೀಡಿದರು.

ವಿಡಿಯೋ ನೋಡಿ:ಮಣಿಪುರ ಧಗಧಗಿಸುತ್ತಿರುವುದೇಕೆ? ಕೈ ಕೊಟ್ಟ ಡಬಲ್‌ ಇಂಜಿನ್‌ ಸರ್ಕಾರ! Janashakthi Media

Donate Janashakthi Media

Leave a Reply

Your email address will not be published. Required fields are marked *