ಆಕಸ್ಮಿಕ ಬೆಂಕಿ ಅವಗಡ: 5 ಅಂಗಡಿಗಳು ಸಂಪೂರ್ಣ ನಾಶ

ಪೆರ್ಲ: ಪೆರ್ಲದಲ್ಲಿ ಶನಿವಾರ ತಡರಾತ್ರಿಯಲ್ಲಿ ಆಕಸ್ಮಿಕ ಅಗ್ನಿ ಸ್ಪರ್ಶದಿಂದ ಅವಗಡ ಸಂಭವಿಸಿದ್ದು, 9 ಅಂಗಡಿಗಳಿಗೆ ಬೆಂಕಿ ಅತ್ತಿಕೊಂಡಿದ್ದು, 5 ಅಂಗಡಿಗಳು ಸಂಪೂರ್ಣವಾಗಿ ಉರಿದು ನಾಶವಾಗಿವೆ. ಬದಿಯಡ್ಕ- ಪುತ್ತೂರು ರಸ್ತೆಯ ಎಡಭಾಗದಲ್ಲಿರುವ ಪೈ ಬಿಲ್ಡಿಂಗ್ ಎಂಬ ಕಮರ್ಶಿಯಲ್ ಕಾಂಪ್ಲೆಕ್ಸ್‌ನಲ್ಲಿ ದುರಂತ ಸಂಭವಿಸಿದೆ.

ಒಟ್ಟು ಸುಮಾರು 1.83 ಕೋಟಿ ರೂ. ನಷ್ಟ ಅಂದಾಜಿಸಲಾಗಿದೆ. ಮಧ್ಯರಾತ್ರಿ 12.15ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಆರಿಸಲು ಪ್ರಯತ್ನಿಸಿದ್ದು, ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ : ಕುರಿ ಹಿಂಡಿನ ಮೇಲೆ ಹರಿದ ಖಾಸಗಿ ಬಸ್ಸು: 150 ಕ್ಕೂ ಹೆಚ್ಚು ಕುರಿಗಳು ಸಾವು

ಶೇಣಿ ನಿವಾಸಿ ನಾರಾಯಣ ಪೂಜಾರಿ ಮಾಲಕತ್ವದಲ್ಲಿರುವ ಪೂಜಾ ಫ್ಯಾನ್ಸಿ ಪೆರ್ಲ ನಿವಾಸಿ ಮೋನು ಅವರ ತರಕಾರಿ ಅಂಗಡಿ, ಜಯದೇವ ಬಾಳಿಗ ಅವರ ಗೌತಮ್ ಕೋಲ್ಡ್ ಹೌಸ್, ಮೊಹಮ್ಮದ್ ಅವರ ಸಾದತ್ ಜನರಲ್ ಸ್ಟೋರ್, ಅಮೆಕ್ಕಳ ನಿವಾಸಿ ಪ್ರವೀಣ್ ಪೈ ಮಾಲಕತ್ವದ ಪ್ರವೀಣ್ ಆಟೋಮೋಬೈಲ್ಸ್, ಸಂಜೀವ ಅವರ ಕಬ್ಬಿನ ಹಾಲಿನ ಅಂಗಡಿಗೆ ಹೆಚ್ಚಿನ ಹಾನಿಯಾಗಿದೆ.

ಕಾಸರಗೋಡು ಹಾಗೂ ಉಪ್ಪಳ ದಿಂದ ಆಗಮಿಸಿದ ಅಗ್ನಿಶಾಮಕ ದಳದವರು, ಬದಿಯಡ್ಕ ಪೊಲೀಸ್ ಅಧಿಕಾರಿಗಳು ಮತ್ತು ಊರವರ ಸಹಕಾರದೊಂದಿಗೆ ಬೆಂಕಿಯನ್ನು ಆರಿಸಿ ಸಮೀಪದ ಕಟ್ಟಡಗಳಿಗೂ ಹಬ್ಬುವುದನ್ನು ತಪ್ಪಿಸಿದರು. ಅಗ್ನಿಶಾಮಕ ದಳಗಳು ಸುಮಾರು ನಾಲ್ಕು ತಾಸುಗಳ ಸತತ ಕಾರ್ಯಾಚರಣೆ ನಡೆಸಿದವು.

ಅಗ್ನಿ ಸ್ಪರ್ಶವಾಗಲು ಕಾರಣ ತಿಳಿದುಬಂದಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಕಟ್ಟಡದ ಮಾಲಕ ಗೋಪಿನಾಥ್ ಪೈ ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ನೋಡಿ : ತುಮಕೂರು ರಸ್ತೆಯ ತಾಳೇಕೇರಿ ಬಳಿ ಭೀಕರ ಅಪಘಾತ Janashakthi Media

Donate Janashakthi Media

Leave a Reply

Your email address will not be published. Required fields are marked *