ಬೆಂಗಳೂರು : ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಇತ್ತೀಚೆಗೆ ಬಂದಿದ್ದ ಬೆದರಿಕೆ ಕರೆಗಳಿಗೆ ಸಂಬಂಧಿಸಿದಂತೆ, ಬೆಂಗಳೂರು ಪೊಲೀಸರು ಮಹಾರಾಷ್ಟ್ರದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು
ಇದನ್ನೂ ಓದಿ : ಗಾಜಾಕ್ಕೆ ‘ಟ್ರಂಪ್ ಯೋಜನೆ ಮಹತ್ವದ ಹೆಜ್ಜೆ’ : ‘ಶಾಶ್ವತ ಶಾಂತಿ’ ಯತ್ತ ಅಥವಾ ‘ಶಾಶ್ವತ ವಸಾಹತು’ವಿನತ್ತ?
ಸಚಿವರಿಗೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ದಿನೇಶ್ ನರೋನೆ ಎಂದು ಗುರುತಿಸಲಾಗಿದೆ. ಈತ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ನಗರ ಪೊಲೀಸರ ವಿಶೇಷ ತಂಡ ಮಹಾರಾಷ್ಟ್ರಕ್ಕೆ ತೆರಳಿ, ಜಂಟಿ ಕಾರ್ಯಾಚರಣೆಯ ಮೂಲಕ ಬಂಧಿಸಿದೆ. ಬೆಂಗಳೂರು
ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಜಾಗಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ನಂತರ, ಅವರಿಗೆ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಕರೆಗಳು ಹಾಗೂ ಅವಾಚ್ಯ ಶಬ್ದಗಳಿಂದ ನಿಂದನೆಗಳು ಬರುತ್ತಿದ್ದವು. ಈ ಕುರಿತು ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಬೆಂಗಳೂರು ನಗರ ಪೊಲೀಸರು ತನಿಖೆ ಕೈಗೊಂಡು ಆರೋಪಿಯ ಸುಳಿವು ಪತ್ತೆಹಚ್ಚಿದ್ದರು.
ಬಂಧಿತ ದಿನೇಶ್ ನರೋನೆ ಅವರ ಹಿನ್ನೆಲೆ, ಬೆದರಿಕೆ ಕರೆಯ ಹಿಂದಿನ ಉದ್ದೇಶ ಮತ್ತು ಈ ಕೃತ್ಯಕ್ಕೆ ಯಾರಾದರೂ ಪ್ರಚೋದನೆ ನೀಡಿದ್ದಾರೆಯೇ ಎಂಬುದರ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ವಿಚಾರಣೆಗಾಗಿ ಆರೋಪಿಯನ್ನು ಶೀಘ್ರದಲ್ಲೇ ನ್ಯಾಯಾಲಯದ ಮೂಲಕ ಬೆಂಗಳೂರಿಗೆ ಕರೆತರಲಾಗುವುದು ಎಂದು ಮೂಲಗಳು ತಿಳಿಸಿವೆ.
ಇದನ್ನೂ ನೋಡಿ : ಧರ್ಮಸ್ಥಳ | ‘ಒಂದೇ ದಿನ 72 ಶವಗಳ ದಫನ್ ʼ – ಪಂಚಾಯತ್ ದಾಖಲೆಗಳಿಂದ ಬಹಿರಂಗ Janashakthi Media #Dharmasthala
