ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಪೊಲೀಸರು ದಾಖಲಿಸರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಐಎಂಎ ಪ್ರವರ್ತಕರ ವಿರುದ್ಧದ ಅಪರಾಧ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಅವರ ಕಚೇರಿ ನಿವಾಸಗಳಲ್ಲಿ ಶೋಧ ನಡೆಸಲಾಗಿದೆ. ಅದರ ತನಿಖೆ ಇನ್ನೂ ಬಾಕಿ ಇದೆ. ಈ ಹಂತದಲ್ಲಿ ಜಾರಿ ನಿರ್ದೇಶನಾಲಯದ ವರದಿಯಲ್ಲಿ ಏನೂ ಇಲ್ಲ ಎಂದು ತಳ್ಳಿಹಾಕಲಾಗದು. ಅಪರಾಧಕ್ಕೆ ಅದೇ ಮೂಲವಾಗುತ್ತದೆ ಎಂಬ ಅಭಿಪ್ರಾಯವನ್ನು ನ್ಯಾಯಪೀಠ ವ್ಯಕ್ತಪಡಿಸಿದೆ. ತೀರ್ಪನ್ನು 30ದಿನ ಅಮಾನತ್ತಿನಲ್ಲಿ ಇರಿಸಿ ಆದೇಶಿಸಿದೆ.
ಜಮೀರ್ ಅಹ್ಮದ್ ಖಾನ್ ತಮ್ಮ ಆದಾಯದ ಮೂಲಕ್ಕೆ ಮೀರಿದ ಆಸ್ತಿ ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ 2019ರಲ್ಲಿ ಜಮೀರ್ ಅಹ್ಮದ್ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು. ಜಾರಿ ನಿರ್ದೇಶನಾಲಯದಿಂದ ವರದಿಯನ್ನು ಪಡೆದ ನಂತರ ಜಮೀರ್ ವಿರುದ್ಧ ಎಸಿಬಿ ಪ್ರಕರಣ ದಾಖಲಿಸಿತ್ತು. ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಮ್ಮ ವಿರುದ್ಧ ಹೂಡಿರುವ ಮೊಕದ್ದಮೆಗಳನ್ನು ರದ್ದುಗೊಳಿಸುವಂತೆ ಜಮೀರ್ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ನ್ಯಾಯಪೀಠ ಅವರ ಅರ್ಜಿಯನ್ನು ವಜಾಗೊಳಿಸಿದೆ. ಸಚಿವ ಜಮೀರ್ ಅಹ್ಮದ್ ಮೇಲೆ ಶೇ. 2031ರಷ್ಟು ಅಕ್ರಮ ಆಸ್ತಿ ಆರೋಪ.
ಇದನ್ನೂ ಓದಿ: ವಿಶ್ವಕಪ್ ಪಂದ್ಯ ವೀಕ್ಷಿಸುವ ಮೋದಿಗೆ ಮಣಿಪುರಕ್ಕೆ ಹೋಗಲು ಸಮಯವಿಲ್ಲವೇ: ಜೈ ರಾಮ್ ರಮೇಶ್
80.44 ಕೋಟಿಯಷ್ಟು ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿರೋ ಆರೋಪ ಸಚಿವ ಜಮೀರ್ ಅಹ್ಮದ್ ಮೇಲಿತ್ತು. ಶೇಕಡಾ 2031ರಷ್ಟು ಅಕ್ರಮ ಆಸ್ತಿ ಗಳಿಸಿದ್ದಾರೆಂದು ಎಸಿಬಿ ಕೇಸ್ ದಾಖಲಿಸಿತ್ತು. ಪ್ರಕರಣದ ತನಿಖೆ ರದ್ದು ಕೋರಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಅರ್ಜಿ ಸಲ್ಲಿಸಿದ್ದರು.
ಸಚಿವ ಜಮೀರ್ ಅರ್ಜಿ ವಜಾಗೊಳಿಸಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಈಗಾಗಲೇ ಮೇಲ್ಮನವಿ ಬಾಕಿ ಇದೆ. ಹೀಗಾಗಿ ಹೈಕೋರ್ಟ್ ಆದೇಶ ತಡೆಹಿಡಿಯುವಂತೆ ಜಮೀರ್ ಪರ ವಕೀಲರ ಮನವಿ ಮಾಡಿದ್ದರು.
ವಿಡಿಯೋ ನೋಡಿ: ದಲಿತರ ಶೃಂಗಸಭೆ : ಸನಾತನಿ ಸರ್ಕಾರದಿಂದ ದಲಿತರ ಮೇಲೆ ನಿರಂತರ ದರ್ಜನ್ಯ – ಜನಾಕ್ರೋಶ Janashakthi Media