5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಎನ್‌ಕೌಂಟರ್

ಹುಬ್ಬಳ್ಳಿ: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ನಗರದಲ್ಲಿ ನಡೆದಿದ್ದೂ, ಕೃತ್ಯ ಎಸಗಿದ ಆರೋಪಿ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬಾತ ಎಂದು ಗುರುತಿಸಲಾಗಿದೆ. ಆತನು ಏಪ್ರಿಲ್‌ 13 ಭಾನುವಾರ ಸಂಜೆ ನಗರದ ತಾರಿಹಾಳ ಸೇತುವೆ ಬಳಿ ಪೊಲೀಸರ ಗುಂಡೇಟಿಗೆ ಮೃತಪಟ್ಟಿದ್ದಾನೆ.

ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ತಾರಿಹಾಳ ಬಳಿ ಸ್ಥಳ ಪರಿಶೀಲನೆಗೆ ಕರೆದೊಯ್ದಾಗ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಅಶೋಕನಗರದ ಪಿಎಸ್‌ಐ ಅನ್ನಪೂರ್ಣ ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಂಡು ಓಡಲು ಯತ್ನಿಸಿದ. ಈ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದಾಗ ಆತನ ಕಾಲಿಗೆ ಹಾಗೂ ಬೆನ್ನಿಗೆ ಗುಂಡು ತಗುಲಿದೆ” ಎಂದು ಘಟನೆ ಸಂಭಂದ ಮಾಹಿತಿ ನೀಡಿದರು.

‘ಗಾಯಗೊಂಡಿದ್ದ ಅವನನ್ನು ತಕ್ಷಣ ಕೆಎಂಸಿ-ಆರ್‌ಐ ಆಸ್ಪತ್ರೆಗೆ ತರಲಾಯಿತು. ಅಷ್ಟರಲ್ಲಿ ಮೃತಪಟ್ಟಿದ್ದ. ಪೊಲೀಸ್‌ ಸಿಬ್ಬಂದಿ ಯಶವಂತ ಮೊರಬ ಮತ್ತು ವೀರೇಶ ಅವರೂ ಘಟನೆಯಲ್ಲಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ವಿವರಿಸಿದರು.

ಇದನ್ನೂ ಓದಿ: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ

ಏನಿದು ಘಟನೆ?:

‘ಭಾನುವಾರ ಬೆಳಿಗ್ಗೆ 10.40ರ ಸುಮಾರಿಗೆ ವಿಜಯನಗರದಲ್ಲಿ ಐದು ವರ್ಷದ ಮಗು ನಾಪತ್ತೆಯಾದ ಕುರಿತು ಪ್ರಕರಣ ದಾಖಲಾಗಿತ್ತು. ನಂತರ, ಮಗು ನಾಪತ್ತೆಯಾದ ಸ್ಥಳದ ಎದುರಿರುವ ಶೆಡ್‌ನಲ್ಲಿ ಮೃತದೇಹ ಪತ್ತೆಯಾಗಿತ್ತು’ ಎಂದರು.

‘ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ನಡೆಸಿದಾಗ, ಕೃತ್ಯದ ಕುರಿತು ಮಾಹಿತಿ ನೀಡಿದ್ದ. ಆದರೆ, ತನ್ನ ವಿಳಾಸ ಹಾಗೂ ಗುರುತಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಿರಲಿಲ್ಲ’ ಎಂದು ಹೇಳಿದರು.

‘ಬಿಹಾರ ಮೂಲದ ಅವನು, ವಿವಿಧ ಊರುಗಳಲ್ಲಿ ಕೆಲಸ ಮಾಡಿದ್ದ. ಹುಬ್ಬಳ್ಳಿಯಲ್ಲೂ ಕೆಲಸ ಮಾಡುತ್ತ, ತಾರಿಹಾಳ ಸೇತುವೆ ಬಳಿಯ ಹಳೇ ಶೆಡ್‌ನಲ್ಲಿ ವಾಸಿಸುತ್ತಿರುವುದಾಗಿ ತಿಳಿಸಿದ್ದ. ಅವನ ಜೊತೆ ಯಾರಿದ್ದಾರೆಂದು ತಿಳಿದುಕೊಳ್ಳಲು, ಅವನನ್ನು ಸ್ಥಳಕ್ಕೆ ಕರೆದುಕೊಂಡು ಹೋದಾಗ ಅವನು ಪೊಳಿಸರ ಮೇಲೆ ಹಲ್ಲೆ ನಡೆಸಲು ಮುಂದಾದ ಆಗ ಎನ್‌ಕೌಂಟರ್‌ ನಡೆದಿದೆ’ ಎಂದರು.

ಇದನ್ನೂ ನೋಡಿ: ಪಿಚ್ಚರ್‌ ಪಯಣ – 155 | ವಿಡಂಬನಾತ್ಮಕ ನಿರೂಪಣೆಯ ಫೆಮಿನಿಚಿ ಫಾತಿಮಾ ವಿಶ್ಲೇಷಣೆ : ಮ ಶ್ರೀ ಮುರಳಿ ಕೃಷ್ಣ

Donate Janashakthi Media

Leave a Reply

Your email address will not be published. Required fields are marked *