ಬೆಳಗಾವಿ | ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದ ಶ್ರೀರಾಮ ಸೇನೆಯ ಮುಖಂಡನ ಬಂಧನ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದ ಶ್ರೀರಾಮಸೇನೆಯ ಮುಖಂಡ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಆಗಸ್ಟ್‌ 2ರಂದು ಬಂಧಿಸಿದ್ದಾರೆ. ಬೆಳಗಾವಿ

ಮುಸ್ಲಿಂ ಧರ್ಮಕ್ಕೆ ಸೇರಿದ ಮುಖ್ಯ ಶಿಕ್ಷಕನನ್ನು ವರ್ಗಾವಣೆ ಮಾಡಿಸಲು ಇಂತಹ ಹೀನ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. 15 ದಿನಗಳ ಹಿಂದೆ ವಿಷಯುಕ್ತ ನೀರು ಸೇವಿಸಿ ಸರ್ಕಾರಿ ಶಾಲೆಯ 11 ಮಕ್ಕಳು ಅಸ್ವಸ್ಥರಾಗಿದ್ದರು. ಬಿಕ್ಷಾ 

ಈ ಪ್ರಕರಣದಲ್ಲಿ ಶ್ರೀರಾಮ ಸೇನೆಯ ಸವದತ್ತಿ ತಾಲೂಕು ಅಧ್ಯಕ್ಷ ಹೂಲಿಕಟ್ಟಿ ಗ್ರಾಮದ ಸಾಗರ ಪಾಟೀಲ, ಕೃಷ್ಣ ಯಾದವ, ನಾಗನಗೌಡ ಪಾಟೀಲ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಬೇಡಿಕೆಗಳನ್ನು ಬಗೆಹರಿಸುವಂತೆ ಸಿಪಿಐ(ಎಂ) ಒತ್ತಾಯ ಬೆಳಗಾವಿ

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಭೀಮಾಶಂಕರ ಗುಳೇದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಮುಖ್ಯ ಶಿಕ್ಷಕನನ್ನು ಶಾಲೆಯಿಂದ ಓಡಿಸಲು ಆರೋಪಿಗಳು ಇಂತಹ ಕೃತ್ಯವೆಸಗಿದ್ದಾರೆ. ವಿಷ ಮಿಶ್ರಿತ ನೀರು ಸೇವಿಸಿ ಮಕ್ಕಳು ಮೃತಪಟ್ಟರೆ ಅದಕ್ಕೆ ಮುಖ್ಯ ಶಿಕ್ಷಕನನ್ನು ಹೊಣೆಯಾಗಿಸಿ ಬೇರೆ ಕಡೆ ವರ್ಗಾವಣೆಯಾಗುತ್ತಾರೆ ಎಂದು ಸಂಚು ರೂಪಿಸಿದ್ದರು ಎಂದು ತಿಳಿಸಿದ್ದಾರೆ.

ಕೃಷ್ಣ ಅನ್ಯ ಜಾತಿಯ ಹುಡುಗಿಯನ್ನು ಪ್ರೀತಿಸುತ್ತಿರುವ ಸಂಗತಿ ತಿಳಿದಿದ್ದ ಆರೋಪಿಗಳು ಪ್ರೀತಿಯ ವಿಷಯ ಬಹಿರಂಗಪಡಿಸುವುದಾಗಿ ಬೆದರಿಸಿ ವಿಷ ಬೆರೆಸಲು ಹೇಳಿದ್ದರು. ಶಾಲೆಯ ಅಮಾಯಕ ಬಾಲಕನಿಗೆ ಚಾಕೊಲೇಟ್ ಮತ್ತು 500 ರೂ. ಕೊಟ್ಟು ಪ್ರಚೋದಿಸಿ ನೀರಿನ ಟ್ಯಾಂಕ್ ನಲ್ಲಿ ವಿಷ ಬೆರೆಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ನೋಡಿ: ಧರ್ಮಸ್ಥಳದ ಕೊಲೆ ಪ್ರಕರಣ | ಉಗ್ರಪ್ಪ ಸಮಿತಿಯಲ್ಲಿ ಏನಿತ್ತು? ವಿ.ಎಸ್.‌ ಉಗ್ರಪ್ಪ ಜೊತೆ ಮಾತುಕತೆJanashakthi Media ಬೆಳಗಾವಿ

Donate Janashakthi Media

Leave a Reply

Your email address will not be published. Required fields are marked *