ಮುಂಬೈ| ನೂತನ ರಾಜ್ಯಪಾಲರಾಗಿ ಆಚಾರ್ಯ ದೇವವ್ರತ್ ಪ್ರಮಾಣ ವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ಆಚಾರ್ಯ ದೇವವ್ರತ್ ಸೆಪ್ಟೆಂಬರ್‌ 15ರಂದು ಪ್ರಮಾಣ ವಚನ ಸ್ವೀಕರಿಸಿದರು. ಮುಂಬೈ

ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದ ಸಿಪಿ ರಾಧಾಕೃಷ್ಣನ್ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಗೆದ್ದು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗುಜರಾತ್ ಗವರ್ನರ್ ಆಚಾರ್ಯ ದೇವವ್ರತ್ ಅವರಿಗೆ ಹೆಚ್ಚುವರಿಯಾಗಿ ಮಹಾರಾಷ್ಟ್ರದ ರಾಜ್ಯಪಾಲರ ಹೊಣೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಕಳೆದ ವಾರ ವಹಿಸಿದ್ದರು.

ಇದನ್ನೂ ಓದಿ: ಹಿರಿಯ ಅಧಿಕಾರಿಗಳು ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ: ಅಧಿಕಾರಿ ಎಚ್. ಪುಷ್ಪಲತಾ ದೂರು

ಸೋಮವಾರ ಇಲ್ಲಿನ ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಅವರು ದೇವವ್ರತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ದೇವವ್ರತ್ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತಿತರ ರಾಜ್ಯದ ಸಚಿವರು, ಉನ್ನತ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

66 ವರ್ಷದ ದೇವವ್ರತ್ ಅವರು 2019 ರಿಂದ ಗುಜರಾತ್ ರಾಜ್ಯಪಾಲರಾಗಿದ್ದಾರೆ. ಅವರು ಹಿಂದಿ ಮತ್ತು ಇತಿಹಾಸದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದಾರೆ ಮತ್ತು ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ಇದನ್ನೂ ನೋಡಿ: ಸಾಂಸ್ಕೃತಿಕ ಲೋಕದ ಮುಖ್ಯ ಉಸಿರು ಸಮುದಾಯ ; ಬರಗೂರು ರಾಮಚಂದ್ರಪ್ಪ Janashakthi Media

Donate Janashakthi Media

Leave a Reply

Your email address will not be published. Required fields are marked *