ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪಕಟಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ ಅವರು ತಿಳಿಸಿದ್ದಾರೆ.ಪತ್ರಕರ್ತ
ಈ ಕುರಿತು ಪುಕಟಣೆ ನೀಡಿರುವ ಅವರು, ಈ ಪ್ರಶಸ್ತಿಗಳನ್ನು ಸರ್ಕಾರವು 2001ನೇ ಸಾಲಿನಿಂದ ಸ್ಥಾಪಿಸಿದ್ದು 2016 ರವರೆಗೆ ನಾಡಿನ 32 ಜನ ಹಿರಿಯ ಪತ್ರಕರ್ತರು ಈ ಎರಡೂ ಪಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿದ್ದ 2017ರಿಂದ 2023ರ ವರೆಗಿನ ಏಳು ವರ್ಷಗಳ ಅವಧಿಯ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಹಿರಿಯ ಪತ್ರಕರ್ತರಾದ ಸನತ್ ಕುಮಾರ್ ಬೆಳಗಲಿ ಹಾಗೂ ಕೆ.ಶಿವಕುಮಾ ಅವರಿದ್ದ ಸಮಿತಿಯು ಆಯ್ಕೆ ಮಾಡಿದೆ. ಪ್ರಶಸ್ತಿಯು ತಲಾ ಒಂದು ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಅಭಿನಂದನಾ ಪತ್ರ ಒಳಗೊಂಡಿರುತ್ತದೆ.
2017ರಿಂದ 2023ರವರೆಗಿನ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರ ವಿವರ:-
ವಿಜಯಲಕ್ಷ್ಮಿ ಶಿಬರೂರು (2017) : ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ಶಿಬರೂರು ಗ್ರಾಮದವರಾದ ವಿಜಯಲಕ್ಷ್ಮಿ ಅವರು, ಕಳೆದ ಸುಮಾರು 25 ವರ್ಷಗಳಿಂದ ನಾಡಿನ ವಿವಿಧ ಮಾಧ್ಯಮಗಳಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಅರಣ್ಯ ಸಂರಕ್ಷಣೆ, ಅಪಾಯಕಾರಿ ಆಹಾರ ಪದಾರ್ಥಗಳು, ಪ್ಲಾಸ್ಟಿಕ್ ಅಪಾಯಗಳು ಮತ್ತಿತರ ಜಾಗೃತಿ ಮೂಡಿಸುವ ವರದಿಗಳನ್ನು ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಪರಿಣಾಮಕಾರಿಯಾಗಿ ಬಿತ್ತರಿಸಿದ್ದಾರೆ. ಪರಿಸರ ಜಾಗೃತಿಯ ವರದಿಗಳನ್ನು ಪ್ರಕಟಿಸಿದ್ದಾರೆ.
ಬಿ.ಎಂ.ಟಿ ರಾಜೀವ್ : (2018): ಮೂಲತ: ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬೆನವಾರ ಗ್ರಾಮದವರು, ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಭಾರತೀಯ ಅರಣ್ಯ ಸೇವೆಯಿಂದ 2006ರಲ್ಲಿ ನಿವೃತ್ತಿ ಹೊಂದಿದ್ದಾರೆ. 1985 ರಿಂದ ವನ್ಯಜೀವಿಗಳು, ಅರಣ್ಯ ಮತ್ತು ಪರಿಸರ ಸಂರಕ್ಷಣೆ ಕುರಿತು ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಲೇಖನ, ಪ್ರಬಂಧಗಳನ್ನು ಬರೆಯುತ್ತಿದ್ದಾರೆ.
ವಿನೋದಕುಮಾರ್ ಬಿ. ನಾಯ್ಕ: (2019) : ಮೂಲತ: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಗುಬ್ಬಿಹಳ್ಳಿ ಗ್ರಾಮದವರು. ಏಷಿಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆಯಲ್ಲಿ ವಿಶೇಷ ಯೋಜನೆಗಳ ವಿಭಾಗದ ಸಂಪಾದಕರಾಗಿರುವ ಇವರು ವಿವಿಧ ಮಾಧ್ಯಮಗಳಲ್ಲಿ ಸುಮಾರು 23 ವರ್ಷಗಳ ಕಾಲ ವನ್ಯಜೀವಿ ಹಾಗೂ ಪರಿಸರ ಕುರಿತು ಅನೇಕ ಪರಿಣಾಮಕಾರಿ ವರದಿಗಳನ್ನು ಮಾಡಿದ್ದಾರೆ. ಪತ್ರಕರ್ತ
ಮಾಲತೇಶ ಅಂಗೂರ (2020): ಹಾವೇರಿ ಜಿಲ್ಲೆಯ ಮಾಲತೇಶ ಗದಿಗೆಪ್ಪ ಅಂಗೂರ ಅವರು ಸುಮಾರು 34 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದಾರೆ. ಕಳೆದ 18 ವರ್ಷಗಳಿಂದ ಕೌರವ ಕನ್ನಡ ದಿನಪತ್ರಿಕೆಯ ಮುಖ್ಯ ವರದಿಗಾರರಾಗಿ ಪರಿಸರಕ್ಕೆ ಸಂಬಂಧಿಸಿದಂತೆ ವನ್ಯಜೀವಿಗಳು, ಕೆರೆಕಟ್ಟೆಗಳು, ಪ್ರಾಣಿಪಕ್ಷಿಗಳು, ಕೀಟಗಳು, ಸಸ್ಯಗಳು, ನಿಸರ್ಗ, ಗುಡ್ಡ ಗಹ್ವರಗಳು, ಅತಿವೃಷ್ಟಿ ಅನಾವೃಷ್ಟಿ ಸೇರಿದಂತೆ ವಿವಿಧ ಪರಿಸರ ಜಾಗೃತಿಯ ವರದಿಗಳನ್ನು ಪುಕಟಿಸಿದ್ದಾರೆ. ‘ಕಾಡು-ಮೇಡು’ ಕೃತಿ ಪ್ರಕಟವಾಗಿದೆ.
ಸುಧೀರ್ ಶೆಟ್ಟಿ (2021): ಉಡುಪಿ ಜಿಲ್ಲೆಯ ಪಾದೆಬೆಟ್ಟು ಗ್ರಾಮದವರಾದ ಇವರು ಮುಂಬೈನಲ್ಲಿ ಫೋಟೋ ಜರ್ನಲಿಸಂ ಪದವಿ ಪಡೆದಿದ್ದಾರೆ. ಅರಣ್ಯ, ವನ್ಯಜೀವಿ, ನದಿ ಮತ್ತು ನೀರಿನ ಮೂಲಗಳ ಸಂರಕ್ಷಣೆ ಮತ್ತಿತರ ವಿಷಯಗಳ ಕುರಿತು ಇವರ ಛಾಯಾಚಿತ್ರಗಳು ಪ್ರದರ್ಶನಗೊಂಡಿವೆ.
ಇದನ್ನೂ ಓದಿ : ಮನು ಭಾಕರ್ ಸೇರಿದಂತೆ ನಾಲ್ವರು ಅಥ್ಲಿಟ್ಸ್ ಗೆ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಘೋಷಣೆ
ಮಲ್ಲಿಕಾರ್ಜುನ ಹೊಸಪಾಳ್ಯ (2022) : ದೇಸಿ ತಳಿ, ನಾಟಿ ಬೀಜಗಳ ಸಂರಕ್ಷಣೆ ಕುರಿತು ವಿಶೇಷ ಆಸಕ್ತಿ, ಜಲಸಂರಕ್ಷಣೆ, ಸುಸ್ಥಿರ ಕೃಷಿ, ಸಿರಿಧಾನ್ಯ ಚಟುವಟಿಕೆಗಳಿಗೆ ಬೆಂಬಲ. ಜಲಜಾಗೃತಿಗಾಗಿ ಕಾರ್ಯಕ್ರಮ ಸಂಘಟನೆ. ಪಾರಂಪರಿಕ ಜಲನಿಧಿಗಳಾದ ತಲಪರಿಗೆ ಬಗ್ಗೆ ಅಧ್ಯಯನ, ಪುನರುಜೀವನಕ್ಕಾಗಿ ಶ್ರಮಿಸುತ್ತಿದ್ದಾರೆ.
ಆರ್.ಮಂಜುನಾಥ್ (ಕೆರೆ ಮಂಜು) (2023) : ಬೆಂಗಳೂರಿನವರಾಗಿರುವ ಆರ್.ಮಂಜುನಾಥ್ ಅವರು,1995ರಿಂದ ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿರುವ ಇವರು ಬೆಂಗಳೂರಿನ ಕೆರೆಗಳ ಬಗ್ಗೆ ‘ನಮ್ಮೂರ್ ಕೆರೆ’ಎಂಬ ಲೇಖನ ಮಾಲಿಕೆ (2008). ಅರ್ಕಾವತಿ ನದಿ ಪುನತನ, ಧಾರವಾಡ ಕೆರೆಗಳ ಅಭಿವೃದ್ಧಿ, ಬೆಂಗಳೂರಿನಲ್ಲಿರುವ ರಾಜಕಾಲುವೆಗಳ ಒತ್ತುವರಿಯಿಂದ ಮಳೆಗಾಲದಲ್ಲಿ ನೀರು ಬಡಾವಣೆಗಳಿಗೆ ಹರಿಯುತ್ತಿದೆ. ಎಲ್ಲೆಲ್ಲಿ ಎಷ್ಟೆಷ್ಟು ರಾಜಕಾಲುವೆ ಒತ್ತುವರಿಯಾಗಿದೆ ಎಂಬುದನ್ನು ನಕ್ಷೆ ಸಹಿತ ಮಾಹಿತಿಯ ಲೇಖನಗಳು ಸೇರಿ ಕೆರೆಗಳ ರಕ್ಷಣೆ ಬಗ್ಗೆ ಪರಿಣಾಮಕಾರಿ ಲೇಖನಗಳನ್ನು ಪ್ರಕಟಿಸಿದ್ದಾರೆ.
2017ರಿಂದ 2023 ರವರೆಗಿನ ಅಭಿವೃದ್ಧಿ, ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರ ವಿವರ:-
ಚೀ.ಜ.ರಾಜೀವ್ (2017) : ಕೃಷಿ, ಶಿಕ್ಷಣ, ಪರಂಪರೆ, ಮತ್ತಿತರ ಕ್ಷೇತ್ರಗಳ ಸವಾಲುಗಳಿಗೆ ಕನ್ನಡಿ ಹಿಡಿಯುವ ಅಭ್ಯುದಯ ಪತ್ರಿಕೋದ್ಯಮಕ್ಕೆ ಉದಾಹರಣೆಯಾಗುವಂತಹ ವರದಿ ಅಂಕಣಗಳನ್ನು ನಿರಂತರವಾಗಿ ಪಕಟಿಸುತ್ತಿದ್ದಾರೆ.
ದೇವಯ್ಯ ಗುತ್ತೇದಾರ್ (2018): ಮೂಲತ: ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕು ಭೈರಾಮಡಗಿ ಗ್ರಾಮದವರಾದ ದೇವಯ್ಯ ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ಮಾನವ ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕದ ತಾಲ್ಲೂಕುಗಳ ಪರಿಸ್ಥಿತಿ, ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಬಡತನ ನಿವಾರಣೆ, ಶಿಶುಮರಣ ತಡೆ ಸೇರಿದಂತೆ ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಕುರಿತ ಅನೇಕ ವಿಶ್ಲೇಷಣಾತ್ಮಕ ಲೇಖನಗಳು, ವರದಿಗಳನ್ನು ಪಕಟಿಸಿದ್ದಾರೆ.
ಗಿರೀಶ್ ಲಿಂಗಣ್ಣ (2019) : ಬೆಂಗಳೂರಿನ ಗಿರೀಶ್ ಲಿಂಗಣ್ಣ ಅವರು ಮೆಕ್ಯಾನಿಕಲ್ ಇಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರರಾಗಿದ್ದಾರೆ. ಬಾಹ್ಯಾಕಾಶ, ರಕ್ಷಣೆ, ಅಂತಾರಾಷ್ಟ್ರೀಯ ವ್ಯವಹಾರಗಳ ವಿಶ್ಲೇಷಕ. ಸಂಯುಕ್ತ ಕರ್ನಾಟಕ ಕನ್ನಡ ಪ್ರಭ, ಇಂಡಿಯನ್ ಎಕ್ಸೆಸ್ ದಿನಪತ್ರಿಕೆಗಳ ಜಾಲತಾಣಗಳ ಅಂಕಣಕಾರರಾಗಿದ್ದಾರೆ.
ಯೋಗೇಶ್ ಎಂ.ಎನ್. (2020): ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕು ಮಾರೇನಹಳ್ಳಿ, ಗ್ರಾಮದವರು. ಕಳೆದ ಸುಮಾರು 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಭ್ರೂಣಹತ್ಯೆ ತಡೆ, ಉನ್ನತ ಶಿಕ್ಷಣ ಸೇರಿದಂತೆ ಅಭಿವೃದ್ಧಿ ವಿಷಯಗಳ ಕುರಿತು ಪರಿಣಾಮಕಾರಿ ವರದಿಗಳನ್ನು ಪ್ರಕಟ ಮಾಡಿದ್ದಾರೆ.
ನೌಶಾದ್ ಬಿಜಾಪುರ (2021) : ಮೂಲತ: ಧಾರವಾಡದವರು. ಪುಸ್ತುತ ಬೆಳಗಾವಿಯಲ್ಲಿ ನೆಲೆಸಿದ್ದು, ದಿ ನ್ಯೂ ಇಂಡಿಯನ್ ಎಕ್ಸೆಸ್ ದಿನಪತ್ರಿಕೆಯ ಹಿರಿಯ ಸಹಾಯಕ ಸಂಪಾದಕರಾಗಿದ್ದಾರೆ. ಕಳೆದ 25 ವರ್ಷಕ್ಕೂ ಹೆಚ್ಚು ಕಾಲದಿಂದ ಅಭಿವೃದ್ಧಿ ಮತ್ತು ಸಾಮಾಜಿಕ ಚಿಂತನೆಗಳಿಂದ ಕೂಡಿದ ಲೇಖನ ಹಾಗೂ ವರದಿಗಳನ್ನು ಪಕಟಿಸಿದ್ದಾರೆ.
ಸತೀಶ್ ಜಿ.ಟಿ (2022) : ಮೂಲತ: ಚಿತ್ರದುರ್ಗದವರು. ಮೈಸೂರು ವಿಶ್ವವಿದ್ಯಾನಿಲಯದಿಂದ ಇಂಗ್ಲೀಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪತ್ರಿಕೋದ್ಯಮದಲ್ಲಿ 2004ರಿಂದ ಇಲ್ಲಿಯವರೆಗೂ ಅಭಿವೃದ್ಧಿಯ ವಿವಿಧ ಆಯಾಮಗಳ ಮೇಲೆ ಬೆಳಕು ಚೆಲ್ಲುವ ಅನೇಕ ವರದಿಗಳನ್ನು ಪ್ರಕಟಿಸಿದ್ದಾರೆ.
ಎಸ್.ಗಿರೀಶ್ ಬಾಬು (2023): ವಿವಿಧ ಮಾಧ್ಯಮಗಳಲ್ಲಿ 27 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರು ಬೆಳಗಾವಿಯ ಕೊಕಟನೂರು ಜಾತ್ರೆಯಲ್ಲಿ ಮುತ್ತು ಕಟ್ಟುವ (ದೇವದಾಸಿ) ಪದ್ಧತಿ ಬಗ್ಗೆ, ಬರೆದ ವರದಿಯು ಈ ಸಾಮಾಜಿಕ ಅನಿಷ್ಠದ ನಿರ್ಮೂಲನೆಗೆ ನೆರವಾಯಿತು. ಶಿಕ್ಷಣ, ಆರೋಗ್ಯ, ಪರಿಸರ, ರಕ್ಷಣೆ, ವಿಜ್ಞಾನ, ತಂತ್ರಜ್ಞಾನ ವಿಷಯಗಳ ಕುರಿತು ನೂರಾರು ವರದಿಗಳನ್ನು ಪ್ರಕಟಿಸಿದ್ದಾರೆ.
ಇದನ್ನೂ ನೋಡಿ : ದೇವನೂರ ಮಹಾದೇವ ಅವರಿಗೆ ವೈಕಂ ಪ್ರಶಸ್ತಿ: ವೈಕಂ ಸತ್ಯಾಗ್ರಹದ ಆಳ ಅಗಲ Janashakthi Media