ಬೆಂಗಳೂರು: ನಗರದ ಮಲ್ಲೇಶ್ವರಂ ಕಚೇರಿಯಲ್ಲಿಯೇ ಎಸಿಪಿ ಕೃಷ್ಣಮೂರ್ತಿ 30 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ.
ಸಾಗರ್ ಹೋಟೆಲ್ ಮಾಲೀಕರ ಬಳಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಪ್ರತಿ ತಿಂಗಳು 32 ಸಾವಿರ ರೂಪಾಯಿ ಕೊಡಬೇಕು ಎಂದು ಎಸಿಪಿ ಕೃಷ್ಣಮೂರ್ತಿ ಬೇಡಿಕೆ ಇಟ್ಟಿದ್ದಾರೆ.
ಇದನ್ನೂ ಓದಿ: ವಾರ್ಡ್‌ಗಳ ಸಮಸ್ಯೆ ಬಗ್ಗೆ ದೂರು ನೀಡಲು ಕ್ಯೂಆರ್ ಕೋಡ್ ಸೌಲಭ್ಯ ಜಾರಿ: ದರ್ಶನ್ ಧ್ರುವನಾರಾಯಣ
ಈ ಬಗ್ಗೆ ಸಾಗರ ಹೋಟೆಲ್ ಮಾಲೀಕ ಲೋಕಾಯುಕ್ತಕ್ಕೆ ದೂರು ನೀಡಿದ್ದರು ಇಂದು 30 ಸಾವಿರ ಲಂಚ ಸ್ವೀಕರಿಸುವಾಗ ಎಸಿಪಿ ಕೃಷ್ಣಮೂರ್ತಿ ಬಲೆಗೆ ಬಿದ್ದಿದ್ದಾರೆ. ಎಸಿಪಿ ಕೃಷ್ಣಮೂರ್ತಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೋ ಸಹ ಲಭ್ಯವಾಗಿತ್ತು.
ಇದನ್ನೂ ನೋಡಿ: ಧರ್ಮಸ್ಥಳ ಪ್ರಕರಣ | ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆಗೆ ಆಗ್ರಹ Janashakthi Media
