ಎಚ್ಎಂಟಿ ಭೂಮಿ ಐಎ ಹಾಕಿದ ಅಧಿಕಾರಿಗಳ ವಿರುದ್ಧ ಕ್ರಮ: ಈಶ್ವರ ಖಂಡ್ರೆ

ಬೆಂಗಳೂರು: ಎಚ್ಎಂಟಿ ವಶದಲ್ಲಿರುವ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸಚಿವ ಸಂಪುಟದ ಅನುಮತಿ ಪಡೆಯದೆ ಸುಪ್ರೀಂ ಕೋರ್ಟ್ ಗೆ ಡಿನೋಟಿಫಿಕೇಷನ್ ಅನುಮತಿ ಕೋರಿ ಐ.ಎ.ಹಾಕಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಅವರ ಉತ್ತರ ಪರಿಶೀಲಿಸಿ ಕ್ರಮ ಕೈಗೊಳ್ಳುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ಅವರು, ಎಚ್.ಎಂ.ಟಿ. ವಶದಲ್ಲಿರುವ 443 ಎಕರೆ ಅರಣ್ಯ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ತಿಳಿಸಿ ಕೆಲವು ಅಧಿಕಾರಿಗಳು, ಸಚಿವ ಸಂಪುಟದ ಗಮನಕ್ಕೂ ತಾರದೆ ತಾವೇ 2020ರಲ್ಲಿ ಸುಪ್ರೀಂಕೋರ್ಟ್ ನಲ್ಲಿ ಇಂಟರ್ ಲೊಕೇಟರಿ ಅರ್ಜಿ – ಐ.ಎ. ಹಾಕಿದ್ದರು. ಅಧಿಕಾರಿ

ಈ ಐ.ಎ. ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ. ಕಳೆದ ಸಚಿವ ಸಂಪುಟ ಸಭೆಯಲ್ಲಿ ಐಎ ಹಿಂಪಡೆಯಲು, ಘಟನೋತ್ತರ ಅನುಮೋದನೆ ನೀಡಲಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳು ಮತ್ತು ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಇದನ್ನೂ ಓದಿ: ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

ಎಚ್.ಎಂ.ಟಿ. ಖಾಸಗಿ ಸಂಸ್ಥೆಗಳೂ ಸೇರಿದಂತೆ ಹಲವು ಸಂಸ್ಥೆಗಳಿಗೆ ಈಗಾಗಲೇ 160 ಎಕರೆ ಜಮೀನನ್ನು 313ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಿದೆ. ಆದರೆ ಆಗ ಘನ ಸುಪ್ರೀಂಕೋರ್ಟ್ ಗೆ ಸಲ್ಲಿಸುವ ಪ್ರಮಾಣ ಪತ್ರದಲ್ಲಿ ಈ ಭೂಮಿಯ ಮೌಲ್ಯ 14300 ಕೋಟಿ ಎಂದು ಹೇಳಿಕೊಂಡಿದೆ ಎಂದೂ ತಿಳಿಸಿದರು.

ಆದರೆ ಈ ಭೂಮಿಯ ಮೌಲ್ಯ ಅತ್ಯಮೂಲ್ಯವಾದ್ದು. ಬೆಂಗಳೂರು ನಗರಕ್ಕೆ ಅತ್ಯಗತ್ಯವಾಗಿ ಬೇಕಾದ ಶ್ವಾಸತಾಣ. ಇದಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಇಂತಹ ಭೂಮಿಯನ್ನು ನಷ್ಟದಿಂದ ಮುಚ್ಚಿ ಹೋಗಿರುವ ಎಚ್.ಎಂ.ಟಿ. ಅಕ್ರಮವಾಗಿ ಖಾಸಗಿಯವರಿಗೆ ಮಾರಾಟ ಮಾಡಿ ರಿಯಲ್ ಎಸ್ಟೇಟ್ ಮಾಡಲು ಬಿಡುವುದಿಲ್ಲ.

ಈ ಭೂಮಿಯನ್ನು ಮರಳಿ ವಶಕ್ಕೆ ಪಡೆದು ಅಲ್ಲಿ ಕಬ್ಬನ್ ಪಾರ್ಕ್ ಅಥವಾ ಲಾಲ್ ಬಾಗ್ ರೀತಿಯಲ್ಲಿ ಒಂದು ಉದ್ಯಾನ ನಿರ್ಮಿಸಲಾಗುವುದು. ಇದು ಏಳು ಕೋಟಿ ಕನ್ನಡಿಗರ ಆಸ್ತಿ. ಇದರ ರಕ್ಷಣೆಗೆ ಎಲ್ಲ ಕನ್ನಡಿಗರೂ ಸರ್ಕಾರದ ಜೊತೆ ನಿಲ್ಲಬೇಕು ಎಂದರು.

ಇದನ್ನೂ ನೋಡಿ: ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 | ಸೌಹಾರ್ದ ಜಾಥಾ – ಬಹಿರಂಗ ಸಭೆ

Donate Janashakthi Media

Leave a Reply

Your email address will not be published. Required fields are marked *