ಬೆಂಗಳೂರು: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ರದ್ದು ಎನ್ನಲಾದ ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಆಡಿಯೋವೊಂದು ಎಲ್ಲೆಡೆ ಹರಿದಾಡಿತ್ತಿದ್ದೂ, “ಬಿ.ಆರ್ ಪಾಟೀಲ್ ದೂರು ನೀಡಿದರೆ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಬಿ.ಆರ್ ಪಾಟೀಲ್ ಭ್ರಷ್ಟಚಾರ ಆರೋಪವನ್ನು ನೇರವಾಗಿ ಹೇಳಿಲ್ಲ. ಯಾರು ಲಂಚ ಕೇಳುತ್ತಿದ್ದಾರೆ ಎಂದು ದೂರು ಕೊಟ್ಟರೆ ಕ್ರಮ ತೆಗೆದುಕೊಳ್ಳುಲಾಗುವುದು ಎಂದರು.
ಇದನ್ನೂ ಓದಿ: ಬೆಂಗಳೂರಿನ ಎಲ್ಲಾ ಮೆಟ್ರೋ ರೈಲು ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗೆ ಅವಕಾಶ ನೀಡಲು ಸಿಪಿಐ(ಎಂ) ಒತ್ತಾಯ
ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವ ಕರ್ನಾಟಕ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಅಲ್ಪಸಂಖ್ಯಾತ ಸಮುದಾಯಗಳಿಗೆ ಮನೆ ಇಲ್ಲ ಎಂದಾಗ ಕೊಡಬೇಕಾಗುತ್ತದೆ. ಇದರಲ್ಲಿ ಧರ್ಮಾಧರಿತ ಪ್ರಶ್ನೇಯೇ ಬರುವುದಿಲ್ಲ. ನಿರ್ಗತಿಕರಿಗೆ ಮನೆಗಳನ್ನು ನೀಡಬೇಕಾಗುತ್ತದೆ.
ಯಾರಿಗೆ ಮನೆ ಇಲ್ಲ ಅವರಿಗೆ ಮನೆ ನೀಡಬೇಕಾಗುತ್ತದೆ. ಪರಿಶಿಷ್ಟರಿಗೆ ನಿವೇಶನ ಕೊಟ್ಟ ನಂತರ ಅವರ ಸಂಖ್ಯೆ ಕಡಿಮೆ ಆಯ್ತು. ಮುಂದೆ ಅದೇ ರೀತಿ ಅಲ್ಪಸಂಖ್ಯಾತ ಸಮುದಾಯಗಳ ಸಂಖ್ಯೆ ಕೂಡ ಕಡಿಮೆ ಆಗಲಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಇದನ್ನೂ ನೋಡಿ: POSH ಕಾಯ್ದೆ ಎಂದರೇನು ಮತ್ತು ಅದು ಹೇಗೆ ಕೆಲಸ ಮಾಡುತ್ತದೆ?Janashakthi Media
