ಡ್ರಗ್ಸ್‌ ಪ್ರಕರಣದಲ್ಲಿ ಚಿತ್ರನಟ ಅಜಾಜ್‌ ಖಾನ್‌ ಬಂಧನ

ಮುಂಬೈ: ಬಾಲಿವುಡ್ ನಟ ಮತ್ತು ಬಿಗ್ ಬಾಸ್ ಮಾಜಿ ಸ್ಪರ್ಧಿಯಾಗಿರುವ ಅಜಾಜ್ ಖಾನ್ ಅವರನ್ನು, ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ.

ಇದಕ್ಕೂ ಮೊದಲು ಮಂಗಳವಾರ ಸಂಜೆ(30-3-2021) ಮುಂಬೈನ ವಿಮಾನ ನಿಲ್ದಾಣದಲ್ಲಿ ಖಾನ್ ಅವರನ್ನು ವಶಕ್ಕೆ ಪಡೆದ ಮಾದಕ ವಸ್ತು ನಿಯಂತ್ರಣ ದಳ( ಎನ್ ಸಿಬಿ , ) ಸತತ ಎಂಟು ಗಂಟೆಗಳ ಕಾಲ ಅವರನ್ನು ವಿಚಾರಣೆಗೊಳಪಡಿಸಿತ್ತು.

ಡ್ರಗ್ ಪೆಡ್ಲರ್ ಶಾದಾಬ್ ಬಟಾಟಾ ಅವರ ವಿಚಾರಣೆ ನಡೆಸುವ ಸಂದರ್ಭದಲ್ಲಿ ಅಜಾಜ್ ಖಾನ್ ಹೆಸರು ಕೂಡ ಪ್ರಕರಣದಲ್ಲಿ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಅಜಾಜ್ ಖಾನ್ ಜೊತೆಗೆ ಅಂಧೇರಿ ಮತ್ತು ಲೋಖಾಂಡವಾಲಾ ಪ್ರದೇಶಗಳಲ್ಲಿ ಶೋಧಕಾರ್ಯ ನಡೆಸಿದೆ.

ಕಳೆದ ವರ್ಷ ಏಪ್ರಿಲ್ ನಲ್ಲಿ ಕೂಡ, ದುರುದ್ದೇಶಪೂರಿತ ಭಾಷಣ, ನಿಷೇಧಿತ ಆದೇಶಗಳ ಉಲ್ಲಂಘನೆ, ಮಾನನಷ್ಟ ಮೊಕದ್ದಮೆಯಡಿಯಲ್ಲಿ ಅಜಾಜ್ ಖಾನ್ ಅವರನ್ನು ಬಂಧಿಸಲಾಗಿತ್ತು. ಅಜಾಜ್ ಖಾನ್ ಹಲವಾರು ಹಿಂದಿ ಮತ್ತು ತೆಲುಗು ಚಿತ್ರದಲ್ಲಿ ನಟಿಸಿದ್ದಾರೆ. ಮಾತ್ರವಲ್ಲದೆ ಬಿಗ್ ಬಾಸ್ 7 ಸೀಸನ್ ನಲ್ಲಿ ಪಾಲ್ಗೊಂಡಿದ್ದರು.

Donate Janashakthi Media

Leave a Reply

Your email address will not be published. Required fields are marked *