ಬೆಂಗಳೂರು : ನ್ಯಾಯಾಧೀಶರ ನಿಲುವನ್ನು ಪ್ರಶ್ನಿಸಿ ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ನಟ ಹಾಗೂ ಹೋರಾಟಗಾರ ಚೇತನ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಆಗಿದೆ.
32ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ. ಒಂದು ಲಕ್ಷ ರೂಪಾಯಿ ಬಾಂಡ್ ಬರೆಸಿಕೊಂಡು ಇಬ್ಬರ ಶ್ಯೂರಿಟಿಯೊಂದಿಗೆ ಜಾಮೀನು ನೀಡಿರೋ ಕೋರ್ಟ್, ಮುಂದೆ ತನಿಖೆಗೆ ಸಹಕರಿಸುವಂತೆ ಸೂಚಿಸಿದೆ.
ನ್ಯಾಯಾಧೀಶರ ಕುರಿತು ಅವಹೇಳನಕಾರಿ ಟ್ವೀಟ್ ಮಾಡಿದ ಆರೋಪಕ್ಕೆ ಸಂಬಂಧಿಸಿ ಚೇತನ್ ವಿರುದ್ಧ ಶೇಷಾದ್ರಿಪುರಂ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದರು. ಸರಕಾರ ಹಾಗೂ ಪೊಲೀಸರ ನಡೆ ಖಂಡಿಸಿ, ರಾಜ್ಯವ್ಯಾಪಿ ಹೋರಾಟಗಳು ನಡೆದಿದ್ದವು. ಚಿತ್ರರಂಗ, ಹಾಗೂ ಜನಪರ ಸಂಘಟನೆಗಳು ಚೇತನ್ ಬೆನ್ನಿಗೆ ನಿಂತಿದ್ದವು. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ನಟ ಚೇತನ್ ಕುಮಾರ್ ಜಾಮೀನು ಪಡೆದುಕೊಂಡಿದ್ದಾರೆ.