ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂಧನ
“ಸಾಮಾನ್ಯ ಜನರನ್ನು ಲೂಟಿ ಮಾಡಲಾಗುತ್ತಿದೆ. ಅದಾನಿಗೆ ಮಾತ್ರ ಮುಕ್ತ ಅವಕಾಶ ನೀಡಲಾಗುತ್ತಿದೆ” ಎಂದು ಆರೋಪಿಸಿರುವ ಖರ್ಗೆ, ಇಂಧನ ದರ ಏರಿಕೆಯಿಂದ ದೇಶದ ಜನರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಬೀಳಲಿದೆ ಎಂದು ಹೇಳಿದ್ದಾರೆ.
ರಾಜ್ಯಸಭೆಯ ಪ್ರತಿಪಕ್ಷ ನಾಯಕನಾಗಿರುವ ಖರ್ಗೆ, ಕೇಂದ್ರ ಸರ್ಕಾರದ ವಿರುದ್ಧ “ದೂರದೃಷ್ಟಿಯ ಕೊರತೆ, ನಾಯಕತ್ವದ ವೈಫಲ್ಯ ಮತ್ತು ಆಡಳಿತ ಅಸಮರ್ಥತೆ” ಎಂಬ ಆರೋಪಗಳನ್ನೂ ಮಾಡಿದ್ದಾರೆ. ಪಶ್ಚಿಮ ಏಷ್ಯಾದ ಸಂಘರ್ಷದಿಂದ ಜಾಗತಿಕ ಕಚ್ಚಾ ತೈಲ ದರ ಏರಿಕೆಯಾಗಿದೆ ಎಂಬ ಕಾರಣವನ್ನು ಸರ್ಕಾರ ನೀಡುತ್ತಿದ್ದರೂ, ಅದರ ಭಾರವನ್ನು ಜನರ ಮೇಲೆಯೇ ಹಾಕಲಾಗುತ್ತಿದೆ ಎಂದು ಟೀಕಿಸಿದರು.
ಇದನ್ನೂ ಓದಿ : ಫಾಲ್ಟಾ ಮರುಚುನಾವಣೆ: ಸ್ಪರ್ಧೆಯಿಂದ ಹಿಂದೆ ಸರಿದ ಜಹಾಂಗೀರ್ ಖಾನ್
ಇತ್ತೀಚೆಗೆ ನಾಲ್ಕು ವರ್ಷಗಳ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಏರಿಸಲಾಗಿದ್ದು, ಕಳೆದ ವಾರ ಲೀಟರ್ಗೆ ₹3 ಹೆಚ್ಚಳ ಮಾಡಿದ್ದ ಕೇಂದ್ರ ಸರ್ಕಾರ ಮಂಗಳವಾರ ಮತ್ತೆ ಸುಮಾರು 90 ಪೈಸೆ ಏರಿಕೆ ಮಾಡಿದೆ. ಇದರಿಂದ ಬೆಲೆ ಏರಿಕೆ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಇಂಧನ ದರ ಏರಿಕೆಯನ್ನು ಟೀಕಿಸಿ, “ದೊಡ್ಡ ಆರ್ಥಿಕ ಆಘಾತ ದೇಶದತ್ತ ಬರುತ್ತಿದೆ. ಅದರ ಹೊರೆ ಸಾಮಾನ್ಯ ಜನರು, ಯುವಕರು ಮತ್ತು ಸಣ್ಣ ವ್ಯಾಪಾರಿಗಳ ಮೇಲೇ ಬೀಳಲಿದೆ” ಎಂದು ಎಚ್ಚರಿಸಿದ್ದಾರೆ.
ಇದೇ ವೇಳೆ, ಜಾಗತಿಕ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತದಲ್ಲಿ ನಡೆದ ದರ ಏರಿಕೆ ಗಲ್ಫ್ ರಾಷ್ಟ್ರಗಳನ್ನು ಹೊರತುಪಡಿಸಿದರೆ ಜಗತ್ತಿನಲ್ಲೇ ಕಡಿಮೆ ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ.
ಇದನ್ನೂ ನೋಡಿ : ಸಾರಿಗೆ ನೌಕರರ ಮುಷ್ಕರ | 25% ವೇತನ ಹೆಚ್ಚಳ : ಸರಕಾರ ಯಾಕೆ ಒಪ್ಪುತ್ತಿಲ್ಲ? | ಎಸ್ ವರಲಕ್ಷ್ಮಿ Janashakthi Media
