ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಹೆಚ್ಚಳಕ್ಕೆ ಕ್ರಮ; ನಾ ನಾಯಕಿ ಸಮಾವೇಶದಲ್ಲಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿದು ಮೂರುವರೇ ವರ್ಷಗಳೂ ಕಳೆದರೂ ಸಹ ಮಹಿಳಾ ಪರ  ಕೆಲಸಗಳನ್ನು ಮಾಡುತ್ತಿಲ್ಲ, ಯೋಜನೆಗಳನ್ನು ರೂಪಿಸಿಲ್ಲ. ನಾವು ಅಧಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುತ್ತೇವೆ ಮತ್ತು ಮಹಿಳೆಯರಿಗೆ ರಾಜಕೀಯದಲ್ಲಿ ಶೇ 33 ಮೀಸಲಾತಿ ನೀಡುತ್ತೇವೆ. ವಿಧಾನಸಭೆ, ಪರಿಷತ್, ಲೋಕಸಭೆಯಲ್ಲಿ ಕೂಡ ಮೀಸಲು ನೀಡುತ್ತೇವೆ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದ ಮುಖ್ಯದ್ವಾರ ಬಳಿ ಕಾಂಗ್ರೆಸ್​ ಪಕ್ಷದಿಂದ ಆಯೋಜಿಸಲಾಗಿರುವ ‘ನಾ ನಾಯಕಿ ಸಮಾವೇಶʼದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನು ಓದಿ: ಜ.16ರಂದು ಅರಮನೆ ಮೈದಾನದಲ್ಲಿ ʻನಾ ನಾಯಕಿʼ ಕಾರ್ಯಕ್ರಮ-ಪ್ರಿಯಾಂಕಾ ಗಾಂಧಿ ಭಾಗಿ: ಉಮಾಶ್ರೀ

ಮುಂದುವರೆದು ಮಾತನಾಡಿದ ಅವರು, ರಾಜ್ಯ ಸರ್ಕಾರ ಇವತ್ತು ದೊಡ್ಡದೊಡ್ಡ ಜಾಹೀರಾಗಳನ್ನಷ್ಟೇ ನೀಡುತ್ತಿವೆ. ಇವರು ಅಧಿಕಾರಕ್ಕೆ ಬಂದು ಇಷ್ಟು ವರ್ಷಗಳಲ್ಲಿ ಮಹಿಳಾ ಪರ ಯೋಜನೆಗಳನ್ನು ನೀಡಿಲ್ಲ. ನಾವು ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದೇವೆ. ನಾವು ಈ ಭರವಸೆ ನೀಡಿದ ಬಳಿಕ ಬಿಜೆಪಿಯವರಿಗೆ ಈಗ ಎಚ್ಚರವಾಗಿದೆ. ಅವರು ನೀಡಿದ ಭರವಸೆಗಳ ಪೈಕಿ ಈವರೆಗೆ ಕೇವಲ 50-60ರಷ್ಟು ಮಾತ್ರ ಈಡೇರಿವೆ. ಉಳಿದ ಯಾವ ಭರವಸೆಗಳನ್ನೂ ಈಡೇರಿಸಿಲ್ಲ ಎಂದು ಆರೋಪಿಸಿದರು.

ಮಹಿಳೆರು ಅಭಿವೃದ್ಧಿಯಾಗದ ಹೊರತು, ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಕಾಂಗ್ರೆಸ್​ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಉದ್ಯೋಗದಲ್ಲಿ ಮಹಿಳೆಯರಿಗೆ ಇರುವ ಮೀಸಲಾತಿಯನ್ನು ಶೇ 30ರಿಂದ 33 ಹೆಚ್ಚಳ ಮಾಡಿದ್ದೇವೆ ಎಂದರು.

ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳಿಗೆ ರೂ. 2000

ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳಿಗೆ 2000 ರೂಪಾಯಿಯನ್ನು ನೀಡುವ ಭರವಸೆಯನ್ನು ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದೆ. ಎರಡು ಸಾವಿರ ರೂಪಾಯಿ ಕೊಡುವ ಗ್ಯಾರಂಟಿ ಮಾದರಿ ಚೆಕ್ ಮಾದರಿ ಚಿತ್ರವನ್ನು ಬಿಡುಗಡೆ ಮಾಡಲಾಯಿತು.

ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಮಾತನಾಡಿ, ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ತೀರ್ಮಾನಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರದಿಂದ ರಾಜ್ಯದ ಮಹಿಳೆಯರು ಏನನ್ನು ಬಯಸುತ್ತಾರೆ? ಎಂಬುದನ್ನ ತಿಳಿಯಲು ರಾಜ್ಯದ ಮಹಿಳೆಯರಿಗೆ ತಮ್ಮ ಭಾವನೆ, ಸಮಸ್ಯೆ, ಸಲಹೆ, ಅಭಿಪ್ರಾಯ ಹಂಚಿಕೊಳ್ಳುವಂತೆ ಕರೆ ನೀಡಿದ್ದರು.

ಇದನ್ನು ಓದಿ: ಕ್ಷೇತ್ರದ ಶಾಂತಿ, ಪ್ರಗತಿಗೆ ಕುಸುಮಾ ಅವರಿಗೆ ಮತ ನೀಡಿ; ಚಿತ್ರನಟಿ ಉಮಾಶ್ರೀ

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೆ ಜಲಜಾ ನಾಯಕ್ ಬಂಜಾರಾ ಶೈಲಿಯ ಶಾಲು ಹಾಕಿ ಸ್ವಾಗತಿಸಿದರು. ಮೋಟಮ್ಮ ಅವರು ಸರವೊಂದನ್ನು ಪ್ರಿಯಾಂಕಾ ಅವರ ಕೊರಳಿಗೆ ತೊಡಿಸಿದರು.

ವೇದಿಕೆಯ ಎಲ್ಲ ಆಸನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಶಾಸಕಿಯರು, ಮಾಜಿ ಸಚಿವೆಯರು, ಮಾಜಿ ಶಾಸಕಿಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಹಂತದ ನಾಯಕಿಯರು ವೇದಿಕೆಯಲ್ಲಿದ್ದರು.‌ ಕಾಂಗ್ರೆಸ್‌ ನಾಯಕಿ ಮಾರ್ಗರೇಟ್ ಆಳ್ವ, ವೇದಿಕೆ ಮೇಲೆ ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಪುಷ್ಪಾ ಅಮರನಾಥ್​, ಮಾಜಿ ಸಚಿವರಾದ ಉಮಾಶ್ರೀ, ಮೋಟಮ್ಮ, ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್​, ಅಂಜಲಿ ನಿಂಬಾಳ್ಕರ್​ ಉಪಸ್ಥಿತರಿದ್ದರು.

ಕಾರ್ಯಕ್ರಮದ ಮುಂಭಾಗದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಉಪಸ್ಥಿತರಿದ್ದರು.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *