ಬೆಳಗಾವಿ : ಜಿಲ್ಲೆಯ ಸವದತ್ತಿ ಡಿಪೋದ ಸಾರಿಗೆ ಸಂಸ್ಥೆಯ ಚಾಲಕ / ನಿರ್ವಾಹಕ ಶಿವಕುಮಾರ್ ನೀಲಗಾರ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಷ್ಕರದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಇದಾಗಿದೆ.
ಸಾರಿಗೆ ನೌಕರರ ಮುಷ್ಕರದ ಸಂದರ್ಭದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದರು. ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ತವರು ಜಿಲ್ಲೆ ಬೆಳಗಾವಿಯ ಶಿವಕುಮಾರ್ ಕಿರುಕುಳ ತಾಳಲಾದರೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಲಾಗಿದೆ.
ಇದನ್ನು ಓದಿ : 3ನೇ ದಿನಕ್ಕೆ ಕಾಲಿಟ್ಟ ಸಾರಿಗೆ ಮುಷ್ಕರ – ಸರಕಾರಿ ಬಸ್ ಸ್ತಬ್ದ
ಶಿವಕುಮಾರ್ ಸವದತ್ತಿಯಲ್ಲಿರುವ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಹನ್ನೆರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.
ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಗದಗದಲ್ಲಿ ಇತ್ತೀಚಿಗೆ ವಸಂತ್ ಎಂಬುವರು ವಿಷಸೇವಿಸಿ ಆತ್ಮಹತ್ಯೆ ಯತ್ನಿಸಿರುವ ಪ್ರಕರಣ ನೆನ್ನೆ ನಡೆದಿತ್ತು. ಇದರ ಬೆನ್ನೆಲ್ಲೆ ಇಂದು ಮತ್ತೊಬ್ಬ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.