ಕೋಲ್ಕತ್ತಾ: ಬಿಜೆಪಿ ವಿರುದ್ಧ ದೇಶದಲ್ಲಿ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಒಕ್ಕೂಟ ಚುನಾವಣೆಯನ್ನು ಎದುರಿಸುತ್ತಿದೆ. ಆದರೆ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ದೇಶಮಟ್ಟದಲ್ಲಿ ‘ಇಂಡಿಯಾ’ ಒಕ್ಕೂಟಕ್ಕೆ ಬೆಂಬಲ ಸೂಚಿಸಿದ್ದರೂ ರಾಜ್ಯದಲ್ಲಿ ಮಾತ್ರ ಒಂಟಿಯಾಗಿ ಹೋರಾಟ ನಡೆಸುವುದಾಗಿ ಹೇಳಿಕೊಂಡಿದೆ. ರಂಜನ್
ಇದೇ ಕಾರಣಕ್ಕೆ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ವಿರುದ್ಧ ರಾಜಕೀಯ ವಾಕ್ಸಮರ ನಡೆಯುತ್ತಿದೆ. ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಬಹಿರಂಗವಾಗಿಯೇ ವಾಕ್ಸಮರ ನಡೆಸುತ್ತಿದ್ದಾರೆ. ಇದರಿಂದ ‘ಇಂಡಿಯಾ’ ಒಕ್ಕೂಟಕ್ಕೆ ಪರಿಣಾಮ ಬೀರಬಹುದು ಎಂಬ ಆತಂಕದಿಂದ ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಧೀರ್ ರಂಜನ್‌ಗೆ ಎಚ್ಚರಿಕೆ ನೀಡಿ ಮೌನವಾಗಿರುವಂತೆ ಸೂಚಿಸಿದ್ದರು. ರಂಜನ್
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ವಾಕ್ಸಮರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮಲ್ಲಿಕಾರ್ಜುನ ಖರ್ಗೆ, ಟಿಎಂಸಿ ಮುಖ್ಯಸ್ಥೆ ಮಮತಾ ಅವರು ‘ಇಂಡಿಯಾ’ ಬಣದ ಭಾಗವಾಗಿದ್ದಾರೆ. ಮಮತಾ ಬ್ಯಾನರ್ಜಿ ಸರ್ಕಾರದ ಭಾಗವಾಗುತ್ತಾರೆ. ಅಧೀರ್ ರಂಜನ್ ಚೌಧರಿ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಈ ನಿರ್ಧಾರಗಳನ್ನು ನಾನು ಮತ್ತು ಹೈಕಮಾಂಡ್ ತೆಗೆದುಕೊಳ್ಳುತ್ತದೆ, ಒಪ್ಪದಿರುವವರು ಹೊರಗೆ ಹೋಗುತ್ತಾರೆ. ಬೇರೆ ಯಾರೂ ಮುಜುಗರ ಆಗುವಂತಹ ಹೇಳಿಕೆ ನೀಡಬಾರದು ಎಂದು ಕಿಡಿಕಾರಿದ್ದರು. ಇದೀಗ ಮಲ್ಲಿಕಾರ್ಜುನ ಖರ್ಗೆ ಈ ಹೇಳಿಕೆ ನೀಡಿದ ಒಂದು ದಿನದ ಬಳಿಕ ಬಂಗಾಳ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಂಜನ್
ಇದನ್ನು ಓದಿ : ಕಾಂಗ್ರೆಸಿಗೆ ರಾಜ್ಯದಲ್ಲಿ ಕನಿಷ್ಠ 15 ಸ್ಥಾನಗಳು
ಮಲ್ಲಿಕಾರ್ಜುನ ಖರ್ಗೆ ಅವರು ಅಧೀರ್ ರಂಜನ್ ವಿರುದ್ಧ ನೀಡಿರುವ ಹೇಳಿಕೆಯನ್ನು ಖಂಡಿಸಿ, ಕೋಲ್ಕತ್ತಾದ ಪಕ್ಷದ ಪ್ರಧಾನ ಕಚೇರಿಯ ಮುಂಭಾಗದಲ್ಲಿ ಎಐಸಿಸಿ ಅಧ್ಯಕ್ಷರ ಪೋಸ್ಟರ್‌ಗೆ ಭಾನುವಾರ ಮಸಿ ಬಳಿಯಲಾಗಿದೆ. ನಿನ್ನೆ ಬೆಳಗ್ಗೆ ಮಲ್ಲಿಕಾರ್ಜುನ ಖರ್ಗೆ ಫೋಟೋಗೆ ಮಸಿ ಬಳಿಯಲಾಗಿದ್ದು, ಆದರೆ ಮಧ್ಯಾಹ್ನ ವೇಳೆ ಅದೇ ಪೋಟೋವನ್ನು ಹಾಲಿನಿಂದ ತೊಳೆದು ಶುದ್ಧಿ ಮಾಡಲಾಗಿದೆ.
ಮಾಹಿತಿ ಪ್ರಕಾರ ಈ ಈ ಕೃತ್ಯ ನಡೆದ ಬಳಿಕ ತೃಣಮೂಲ ಕಾಂಗ್ರೆಸ್ ವಿರುದ್ಧ ಕೋಲ್ಕತ್ತಾ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಪಶ್ಚಿಮ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಮತ್ತು ಎಐಸಿಸಿ ಅಧ್ಯಕ್ಷರ ಮಧ್ಯೆ ಭಿನ್ನಾಭಿಪ್ರಾಯ ಮೂಡಿಸಲು ತೃಣಮೂಲ ಕಾಂಗ್ರೆಸ್ ಮಾಡಿರುವ ಕುತಂತ್ರವಾಗಿದೆ ಎಂದು ಕೋಲ್ಕತ್ತಾ ಕಾಂಗ್ರೆಸ್ ಆರೋಪ ಮಾಡಿದೆ. ಅಲ್ಲದೇ ಈ ಕೃತ್ಯದ ವಿರುದ್ಧ ಪೊಲೀಸರಿಗೆ ಕಾಂಗ್ರೆಸ್ ದೂರು ನೀಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ ಬಳಿಕ ಪ್ರತಿಕ್ರಿಯೆ ನೀಡಿದ್ದ ಅಧೀರ್ ರಂಜನ್ ಚೌಧರಿ, ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರು ಎಷ್ಟೇ ಕಠಿಣ ಸಂದೇಶ ನೀಡಿದರೂ ಪಶ್ಚಿಮ ಬಂಗಾಳದಲ್ಲಿ ಪಕ್ಷದ ಅಸ್ತಿತ್ವವನ್ನು ರಕ್ಷಿಸಲು ಅಗತ್ಯವಾದ ಹಾದಿಯಲ್ಲಿ ನಡೆಯುತ್ತೇನೆ. ಬಂಗಾಳದಲ್ಲಿ ನಮ್ಮ ಕಾರ್ಯಕರ್ತರನ್ನು ಕೊಂದ ಮಹಿಳೆಯೊಂದಿಗೆ ನಾನು ಸ್ನೇಹದಿಂದ ಇರಲಾರೆ ಎಂದು ಸ್ಪಷ್ಟಪಡಿಸಿದ್ದರು.
ಇದನ್ನು ನೋಡಿ : ಪಂಜಾಬ್ ಲೋಕಸಭೆ : ” ದೆಲ್ಲಿ ದಾರಿ ಬಂದ್ ಮಾಡಿದ್ದ ಬಿಜೆಪಿಗೆ ಹಳ್ಳಿ ದಾರಿ ಬಂದ್ ” ವ್ಯಾಪಕಗೊಂಡ ಅನ್ನದಾತರ ಆಕ್ರೋಶ