ಬೆಂಗಳೂರು: ಸೂರ್ಯನನ್ನು ಅಧ್ಯಯನ ಮಾಡುವ ಆದಿತ್ಯ ಎಲ್ 1 ಗಗನನೌಕೆಯನ್ನು ಸೆಪ್ಟೆಂಬರ್ 2 ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಮಾಹಿತಿ ನೀಡಿದೆ. ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಬಹು ನಿರೀಕ್ಷಿತ ಸೂರ್ಯಯಾನ ಯೋಜನೆ ಉಡಾವಣೆಗೆ ಮುಹೂರ್ತ ಫಿಕ್ಸ್ ಮಾಡಿದೆ. ಸೆಪ್ಟೆಂಬರ್ 2 ಶನಿವಾರ ಬೆಳಗ್ಗೆ 11:50ಕ್ಕೆ PSLV-C57 ಉಡಾವಣಾ ನೌಕೆಯ ಮೂಲಕ ಆದಿತ್ಯಾ ಎಲ್ 1 ಉಪಗ್ರಹವನ್ನು ಉಡಾವಣೆ ಮಾಡಲಾಗುತ್ತದೆ. ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಈ ಉಡಾವಣೆ ನಡೆಯಲಿದೆ ಎಂದು ಇಸ್ರೋ ಮಾಹಿತಿ ನೀಡಿದೆ.
ಸೂರ್ಯನನ್ನು ಅಧ್ಯಯನ ಮಾಡುವ ಆದಿತ್ಯ ಎಲ್ 1 ಗಗನನೌಕೆ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ. ಇದು ಭೂಮಿಯಿಂದ ಸರಿಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ ಸೂರ್ಯನ ಲ್ಯಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ನೆಲೆಗೊಳ್ಳಲಿದೆ. ಉಡಾವಣೆಯ ಬಳಿಕ L1 ಪಾಯಿಂಟ್ಗೆ ಪ್ರಯಾಣಿಸಲು ಸುಮಾರು 120 ದಿನಗಳನ್ನು ತೆಗೆದುಕೊಳ್ಳುತ್ತದೆ. ಆ ನಂತರ ಸೂರ್ಯನ ಕುರಿತು ಅಭೂತಪೂರ್ವ ಒಳನೋಟಗಳನ್ನು ಒದಗಿಸುವ ಗುರಿ ಹೊಂದಿದೆ.
ಇದನ್ನೂ ಓದಿ:ಚಂದ್ರಯಾನ-3 ಇಸ್ರೋ ವಿಜ್ಞಾನಿಗಳಿಗೆ 17 ತಿಂಗಳಿನಿಂದ ಸಂಬಳ ಕೊಟ್ಟಿಲ್ಲ; ದಿಗ್ವಿಜಯ್ ಸಿಂಗ್
ಉಪಗ್ರಹದಲ್ಲಿನ ಪೆಲೋಡ್ಗಳನ್ನು ಸೂರ್ಯನಿಂದ ಹೊರಸೂಸುವ ಅತ್ಯಂತ ಶಕ್ತಿಶಾಲಿ ಕಿರಣಗಳನ್ನು ಅಧ್ಯಯನ ಮಾಡುವಂತೆ ವಿನ್ಯಾಸಗೊಳಿಸಲಾಗಿದೆ. ಇವುಗಳು ದ್ಯುತಿಗೋಳ, ವರ್ಣಗೋಳ, ಸೂರ್ಯನ ಹೊರ ಪದರಗಳು, ಸೌರ ಶಕ್ತಿ ಕೋಶಗಳು ಮತ್ತು ಸೂರ್ಯನ ಕಾಂತಕ್ಷೇತ್ರವನ್ನು ಅಧ್ಯಯನ ನಡೆಸಲಿವೆ.
🚀PSLV-C57/🛰️Aditya-L1 Mission:
The launch of Aditya-L1,
the first space-based Indian observatory to study the Sun ☀️, is scheduled for
🗓️September 2, 2023, at
🕛11:50 Hrs. IST from Sriharikota.Citizens are invited to witness the launch from the Launch View Gallery at… pic.twitter.com/bjhM5mZNrx
— ISRO (@isro) August 28, 2023