ರಾಮ ಮಂದಿರ ಶಂಕುಸ್ಥಾಪನೆಯಲ್ಲಿ ಪಾಲ್ಗೊಳ್ಳದಂತೆ ಅಡ್ವಾಣಿ, ಜೋಶಿಗೆ ಮನವಿ!

ನವದೆಹಲಿಫ: ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ದುಷ್ಕೃತ್ಯದ ಪ್ರಮುಖ ರುವಾರಿ ಹಿರಿಯ ಬಿಜೆಪಿ ನಾಯಕರಾದ ಎಲ್‌. ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಮುಂದಿನ ತಿಂಗಳು ನಡೆಯುವ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಹಾಜರಾಗದಂತೆ ಮನವಿ ಮಾಡಲಾಗಿದೆ ಎಂದು ವರದಿಯಾಗಿದೆ. “ಇಬ್ಬರೂ ಕುಟುಂಬದ ಹಿರಿಯರಾಗಿದ್ದು ಮತ್ತು ಅವರ ವಯಸ್ಸು ಹಾಗೂ ಆರೋಗ್ಯವನ್ನು ಪರಿಗಣಿಸಿ, ಅವರನ್ನು ಬರದಂತೆ ವಿನಂತಿಸಲಾಯಿತು. ಅದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ” ಎಂದು ರಾಮ ಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೋಮವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಾಬರಿ ಮಸೀದಿ ಒಡೆದ ಜಾಗದಲ್ಲಿ ನಿರ್ಮಿಸಿದ ನಿರ್ಮಾಣಗೊಳ್ಳುತ್ತಿರುವ ಕಟ್ಟಡಕ್ಕೆ ಜನವರಿ 22 ರಂದು ಮಹಾಮಸ್ತಕಾಭಿಷೇಕ ನಡೆಯಲಿದ್ದು, ಅದಕ್ಕಾಗಿ  ಸಮಾರಂಭಕ್ಕೆ ಭರದ ಸಿದ್ಧತೆಗಳು ನಡೆಯುತ್ತಿದೆ ಎಂದು ಚಂಪತ್ ರಾಯ್ ಹೇಳಿದ್ದಾರೆ. “ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಜನವರಿ 15 ರೊಳಗೆ ಸಿದ್ಧತೆಗಳು ಪೂರ್ಣಗೊಳ್ಳಲಿವೆ. ‘ಪ್ರಾಣ ಪ್ರತಿಷ್ಠಾ’ ಪೂಜೆಯು ಜನವರಿ 16 ರಿಂದ ಪ್ರಾರಂಭವಾಗಲಿದ್ದು, ಇದು ಜನವರಿ 22 ರವರೆಗೆ ನಡೆಯಲಿದೆ” ಎಂದು ಅವರು ಹೇಳಿದ್ದಾರೆ. ರಾಮ ಮಂದಿರ

ಇದನ್ನೂ ಓದಿ: ಮೋದಿ ಸರ್ಕಾರ ಎಲ್ಲಾ ಪ್ರಜಾಸತ್ತಾತ್ಮಕ ಮಾನದಂಡಗಳನ್ನು ಕಸದ ಬುಟ್ಟಿ ಎಸೆಯುತ್ತಿದೆ: ಸಂಸದರ ಅಮಾನತು ಕುರಿತು ಖರ್ಗೆ

ಆಹ್ವಾನಿತರ ವಿವರವಾದ ಪಟ್ಟಿಯನ್ನು ನೀಡಿದ ಚಂಪತ್ ರಾಯ್, ಆರೋಗ್ಯ ಮತ್ತು ವಯೋಸಹಜ ಕಾರಣಗಳಿಂದಾಗಿ ಅಡ್ವಾಣಿ ಮತ್ತು ಜೋಶಿ ಅವರು ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಅಡ್ವಾಣಿ ಅವರಿಗೆ ಈಗ 96 ವರ್ಷವಾಗಿದ್ದು, ಮುಂದಿನ ತಿಂಗಳು ಜೋಶಿ ಅವರಿಗೆ 90 ವರ್ಷ ತುಂಬಲಿದೆ. ಆದರೆ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ಸಮಾರಂಭಕ್ಕೆ ಆಹ್ವಾನಿಸಲು ಮೂವರು ಸದಸ್ಯರ ತಂಡ ರಚಿಸಲಾಗಿದೆ ಎಂದು ರಾಯ್ ಹೇಳಿದ್ದಾರೆ. ದೇವೇಗೌಡ ಅವರಿಗೆ 90 ವರ್ಷ ವಯಸ್ಸಾಗಿದೆ. ರಾಮ ಮಂದಿರ

“ಆರು ‘ದರ್ಶನ’ಗಳ (ಪ್ರಾಚೀನ ಶಾಲೆಗಳು) ಶಂಕರಾಚಾರ್ಯರು ಮತ್ತು ಸುಮಾರು 150 ಸಂತರು ಮತ್ತು ಋಷಿಮುನಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಮಾರಂಭಕ್ಕೆ ಸುಮಾರು 4,000 ಸಂತರು ಮತ್ತು 2,200 ಇತರ ಅತಿಥಿಗಳನ್ನು ಆಹ್ವಾನಿಸಲಾಗಿದೆ. ಕಾಶಿ ವಿಶ್ವನಾಥ, ವೈಷ್ಣೋದೇವಿಯಂತಹ ಪ್ರಮುಖ ದೇವಾಲಯಗಳ ಮುಖ್ಯಸ್ಥರು ಮತ್ತು ಧಾರ್ಮಿಕ ಮತ್ತು ಸಾಂವಿಧಾನಿಕ ಸಂಸ್ಥೆಗಳ ಪ್ರತಿನಿಧಿಗಳನ್ನು ಸಹ ಆಹ್ವಾನಿಸಲಾಗಿದೆ” ಎಂದು ರಾಯ್ ಹೇಳಿದ್ದಾರೆ.

ಇದನ್ನೂ ಓದಿ: ಸೋನಿಯಾ ಗಾಂಧಿ ಅವರನ್ನು ಲೋಕಸಭೆ ಚುನಾವಣೆಗೆ ರಾಜ್ಯದಿಂದ ಸ್ಪರ್ಧಿಸುವಂತೆ ಆಹ್ವಾನಿಸಿದ ತೆಲಂಗಾಣ ಕಾಂಗ್ರೆಸ್

ಆಧ್ಯಾತ್ಮಿಕ ನಾಯಕ ದಲೈಲಾಮಾ, ಕೇರಳದ ಮಾತಾ ಅಮೃತಾನಂದಮಯಿ, ಯೋಗ ಗುರು ಬಾಬಾ ರಾಮ್‌ದೇವ್, ಸಿನಿ ತಾರೆಯರಾದ ರಜನಿಕಾಂತ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್, ಅರುಣ್ ಗೋವಿಲ್, ಚಲನಚಿತ್ರ ನಿರ್ದೇಶಕ ಮಧುರ್ ಭಂಡಾರ್ಕರ್ ಮತ್ತು ಪ್ರಮುಖ ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ, ಅನಿಲ್ ಅಂಬಾನಿ, ಖ್ಯಾತ ಚಿತ್ರಕಲಾವಿದ ವಾಸುದೇವ್ ಕಾಮತ್, ನಿರ್ದೇಶಕ ನಿಲೇಶ್ ದೇಸಾಯಿ ಸೇರಿದಂತೆ ಹಲವು ಗಣ್ಯರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮಹಾಮಸ್ತಕಾಭಿಷೇಕದ ನಂತರ ಜನವರಿ 24 ರಿಂದ 48 ದಿನಗಳ ಕಾಲ ಧಾರ್ಮಿಕ ಸಂಪ್ರದಾಯದಂತೆ ಮಂಡಲ ಪೂಜೆ ನಡೆಯಲಿದೆ. ಜನವರಿ 23 ರಂದು ಭಕ್ತರಿಗಾಗಿ ದೇವಾಲಯವನ್ನು ತೆರೆಯಲಾಗುವುದು ಎಂದು ಅವರು ಹೇಳಿದ್ದು, “ಅಯೋಧ್ಯೆಯ ಮೂರಕ್ಕೂ ಹೆಚ್ಚು ಸ್ಥಳಗಳಲ್ಲಿ ಅತಿಥಿಗಳಿಗೆ ತಂಗಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೆ, ವಿವಿಧ ಮಠಗಳು, ದೇವಾಲಯಗಳು ಮತ್ತು ಮನೆಯ ಕುಟುಂಬಗಳಿಂದ 600 ಕೊಠಡಿಗಳು ಲಭ್ಯವಿವೆ” ಎಂದು ರಾಯ್ ಹೇಳಿದ್ದಾರೆ.

ವಿಡಿಯೊ ನೋಡಿ: ಸಮುದಾಯ ರಾಜ್ಯ ಸಮ್ಮೇಳನ : ರಂಗಗೀತೆಗಳು : ಜರ್ನಿ ಥಿಯೇಟರ್ ತಂಡದಿಂದ Janashakthi Media

Donate Janashakthi Media

Leave a Reply

Your email address will not be published. Required fields are marked *