ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಬಿಎಲ್ ಶಂಕರ್ ರಾಜೀನಾಮೆ

ಬೆಂಗಳೂರು: ಕರ್ನಾಟಕ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖಾಂತರ ನಾಡಿನ ಹೆಸರಾಂತ ಸಾಹಿತಿ ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರ ಬದುಕು ಬರಹ ಹಾಗೂ ಅವರ ಪರಿಸರ ಕಾಳಜಿಯನ್ನು ಜನತೆಗೆ ತಲುಪಿಸುವು ನಿಟ್ಟಿನಲ್ಲಿ ಸ್ಥಾಪಿಸಿರುವ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಬಿ.ಎಲ್.‌ ಶಂಕರ್‌ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ಬಿ.ಎಲ್.‌ ಶಂಕರ್‌ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಕೆ.ಪಿ ಪೂರ್ಣಚಂದ್ರತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಈ ಮೂಲಕ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಇಲ್ಲಿಯವರೆಗೆ ತಾವು ಹಾಗೂ ಪ್ರತಿಷ್ಠಾನದ ಇತರ ಸದಸ್ಯರು ಹಾಗೂ ಸಿಬ್ಬಂದಿವರ್ಗದವರು ನೀಡಿರುವ ಸಕಾಲಿಕ ಸಹಕಾರಕ್ಕೆ ಆಭಾರಿಯಾಗಿದ್ದೇನೆ. ಸದರಿ ರಾಜೀನಾಮೆಯನ್ನು ಅಂಗೀಕರಿಸಿ ದೃಢೀಕರಿಸಬೇಕಾಗಿ ಕೋರುತ್ತೇನೆ ಎಂದು ಕೋರಿದ್ದಾರೆ.

ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಕಚೇರಿಯನ್ನು ಹೊಂದಿದೆ.

ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಬಿ.ಎಲ್. ಶಂಕರ್ ಅವರು 2022ರಲ್ಲಿ ಆಯ್ಕೆಯಾಗಿದ್ದು, ನಾಲ್ಕನೆ ಬಾರಿಗೆ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಮುಂದಿನ ಮೂರು ವರ್ಷದವರೆಗೆ ಆಡಳಿತ ನಡೆಸಲಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *