ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳ ವಿರುದ್ಧ ಮಧ್ಯಂತರ ಪ್ರತಿಬಂಧಕಾದೇಶ

ಬೆಂಗಳೂರು : ವಕೀಲ ಕೆ ಎನ್‌ ಜಗದೀಶ್‌ ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಆಕ್ಷೇಪಾರ್ಹವಾದ ಹೇಳಿಕೆ/ಸುದ್ದಿ ಪ್ರಕಟಿಸದಂತೆ ಪ್ರತಿಬಂಧಕಾದೇಶ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಬೆಂಗಳೂರಿನ ಸತ್ರ ನ್ಯಾಯಾಲಯವು ಬುಧವಾರಕ್ಕೆ ಆದೇಶ ಕಾಯ್ದಿರಿಸಿದೆ.

ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಸಲ್ಲಿಸಿರುವ ಮೂಲ ದಾವೆಯ ಭಾಗವಾಗಿ ಸಲ್ಲಿಕೆಯಾಗಿರುವ ಮಧ್ಯಂತರ ಅರ್ಜಿಯ ವಿಚಾರಣೆಯನ್ನು 8ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ವಾಣಿ ಎ. ಶೆಟ್ಟಿ ಅವರು ನಡೆಸಿದರು.

ಇದನ್ನು ಓದಿ : ಸಂತ್ರಸ್ತೆ ಅಪಹರಣ ಪ್ರಕರಣ: ಶಾಸಕ ರೇವಣ್ಣ ಜಾಮೀನು ಆದೇಶ ಎತ್ತಿ ಹಿಡಿದ ಹೈಕೋರ್ಟ್‌; ಆರು ಆರೋಪಿಗಳಿಗೂ ಜಾಮೀನು ಮಂಜೂರು

“ಫಿರ್ಯಾದಿಯ ಪರವಾಗಿ ಸಲ್ಲಿಕೆಯಾಗಿರುವ ಮಧ್ಯಂತರ ಅರ್ಜಿಯ ಕುರಿತು ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರ ವಾದ ಆಲಿಸಲಾಗಿದೆ. ಸಂಬಂಧಿತ ದಾಖಲೆಗಳ ಮೆಮೊವನ್ನು ಸಲ್ಲಿಸಿದ್ದಾರೆ. ಆಗಸ್ಟ್‌ 28ರಂದು ಆದೇಶ ಮಾಡಲಾಗುವುದು” ಎಂದು ನ್ಯಾಯಾಲಯ ಹೇಳಿದೆ.

ಬಸವರಾಜ ಬೊಮ್ಮಾಯಿ ಅವರ ಆಪ್ತ ಸಹಾಯಕ ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ಪೊಲೀಸರು ತನ್ನನ್ನು ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ ಎಂದು ವಕೀಲ ಜಗದೀಶ್‌ ವಿಡಿಯೊ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಅವರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹೇ

“ಪ್ರತಿವಾದಿಗಳಿಗೆ ಸಂಬಂಧಿಸಿದ ಯಾವುದೇ ವ್ಯಕ್ತಿಗಳು ಮುಂದಿನ ವಿಚಾರಣೆಯವರೆಗೆ ಫಿರ್ಯಾದಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಮಾನಹಾನಿ ಉಂಟು ಮಾಡುವ ಸುದ್ದಿ ಪ್ರಸಾರ, ಪ್ರಕಟ ಮತ್ತು ಹಂಚಿಕೆ ಮಾಡಬಾರದು. 48ನೇ ಪ್ರತಿವಾದಿಯಾಗಿರುವ ʼಎಕ್ಸ್‌ʼ ಬೊಮ್ಮಾಯಿ ಅವರಿಗೆ ಸಂಬಂಧಿಸಿದ ಎರಡು ಟ್ವೀಟ್‌ಗಳನ್ನು 24 ಗಂಟೆಯ ಒಳಗೆ ತೆಗೆದು ಹಾಕಬೇಕು. ಫಿರ್ಯಾದಿ ಬೊಮ್ಮಾಯಿ ಅವರು ನಾಗರಿಕ ಪ್ರಕ್ರಿಯಾ ಸಂಹಿತೆ ನಿಯಮಗಳನ್ನು ಅನುಪಾಲಿಸಬೇಕು. ಏಕಪಕ್ಷೀಯ ಮಧಂತರ ಪ್ರತಿಬಂಧಕಾದೇಶ ಮಾಡಲಾಗಿದ್ದು, ಮಧ್ಯಂತರ ಅರ್ಜಿಗೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ನೋಟಿಸ್‌ ಮತ್ತು ಸಮನ್ಸ್‌ ಜಾರಿ ಮಾಡಲಾಗಿದೆ” ಎಂದು ಆದೇಶದಲ್ಲಿ ದಾಖಲಿಸಲಾಗಿದೆ. ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್‌ 9ಕ್ಕೆ ಮುಂದೂಡಲಾಗಿದೆ.

ಇದನ್ನು ನೋಡಿ : ನನ್ನ ಬಳಿ ಮಾಜಿ ಸಿಎಂ ಅಶ್ಲೀಲ ಸಿಡಿ ಇದೆ ಎಂದ ವಕೀಲ!ಸುದ್ದಿ ಪ್ರಸಾರ ಮಾಡದಂತೆ ಬೊಮ್ಮಾಯಿ‌ ಕೋರ್ಟ್ ಮೊರೆ!!

Donate Janashakthi Media

Leave a Reply

Your email address will not be published. Required fields are marked *