ಪವಿತ್ರ ಕುರಾನ್‌ನಲ್ಲಿ ಸ್ಥಾನ ಪಡೆದಿರುವ ಹೆಸರನ್ನು ನಾಯಿ ಮರಿಗೆ ಇಟ್ಟಿದ್ದಕ್ಕಾಗಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲಾ ನ್ಯಾಯಾಲಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ಗೋವಾ ಪ್ರವಾಸ ಮುಗಿಸಿ ಬಂದಿದ್ದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಲ್ಲಿಂದ ನಾಯಿಮರಿಯೊಂದನ್ನ ತಂದಿದ್ದರು. ವಿಶ್ವ ಪ್ರಾಣಿದಿನದಂದು ಅದನ್ನು ಅಮ್ಮ ಸೋನಿಯಾ ಗಾಂಧಿಗೆ ಉಡುಗೊರೆಯಾಗಿ ನೀಡಿದ್ದರು.
ಇದನ್ನೂ ಓದಿ:ಇಸ್ರೇಲ್ – ಹಮಾಸ್ ಸಂಘರ್ಷ ಕೊನೆಗೊಳಿಸಿ, ನರಮೇಧ ನಿಲ್ಲಿಸಿ – ಸಿಪಿಐಎಂ ಒತ್ತಾಯ
ನಾಯಿಯ ಹೆಸರು ತನ್ನ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ.ನೂರಿ ಪದವು ನಿರ್ದಿಷ್ಟವಾಗಿ ಇಸ್ಲಾಂಗೆ ಸಂಬಂಧಿಸಿದೆ, ಅಲ್ಲದೆ ಕುರ್ ಆನ್‌ನಲ್ಲಿ ಕೂಡಾ ಈ ಉಲ್ಲೇಖವನ್ನು ಕಾಣಬಹುದು ಎಂದು ಕೂಡಾ ಈ ಉಲ್ಲೇಖವನ್ನು ಕಾಣಬಹದು ಎಂದು ಎಐಎಂಐಎಂ ಮುಖಂಡ ಮಹಮ್ಮದ್ ಫರ್ಹಾನ್ ಹೇಳಿದ್ದಾರೆ. ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ದೂರು ಸಲ್ಲಿಸಲಾಗಿದೆ.
ದೂರುದಾರರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನವೆಂಬರ್ 8 ರಂದು ದಿನಾಂಕವನ್ನು ನಿಗದಿಪಡಿಸಿದ್ದಾರೆ ಎಂದು ಫರ್ಹಾನ್ ಅವರ ವಕೀಲ ಅಲಿ ಹೇಳಿದ್ದಾರೆ. ರಾಹುಲ್ ಗಾಂಧಿ ಕೂಡ ತಮ್ಮ ಫೇಸ್ ಬುಕ್ ಮತ್ತು ಯೂಟ್ಯೂಬ್ ಖಾತೆಗಳಲ್ಲಿ ನಾಯಿಮರಿಯ ಫೋಟೊವನ್ನು ಹಂಚಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ವಿಡಿಯೋ ನೋಡಿ:“ನಮ್ಮ ಹೆಸರಿನಲ್ಲಿ ಪ್ಯಾಲೆಸ್ತೀನಿಯನ್ನರ ನರಮೇಧ ಮಾಡಬೇಡಿ” Janashakthi Media