ಉಡುಪಿ | ಕಾರ್ಮಿಕರ ರಸ್ತೆ ತಡೆ ಸಂಹಿತೆ ವಿರುದ್ಧ ಆಕ್ರೋಶ

ಉಡುಪಿ: ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಗುರುವಾರ ನಗರದ ಜೋಡುಕಟ್ಟೆಯ ಬಳಿ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ : ಜಲಾಶಯ ಮಟ್ಟ ಎತ್ತರಿಸಿ, ನೀರಾವರಿ ಕ್ಷೇತ್ರ ವಿಸ್ತರಿಸಲು ಆಗ್ರಹ; ರೈತರು ಪ್ರತಿಭಟನೆ

ಅದಕ್ಕೂ ಮೊದಲು ನಗರದ ಕೆಎಸ್‌ಆರ್‌ಟಿಸಿ ಹಳೆ ಬಸ್ ನಿಲ್ದಾಣದ ಬಳಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಚಿಂತಕ ಕೆ. ಫಣಿರಾಜ್, ಕಳೆದ 12 ವರ್ಷಗಳಿಂದ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಎಲ್ಲಾ ಹಕ್ಕುಗಳನ್ನು ಧಮನ ಮಾಡುತ್ತಿದೆ ಎಂದು ಆರೋಪಿಸಿದರು. ಬಂಡವಾಳಶಾಹಿಗಳಿಗೆ ಪರವಾದ ಮತ್ತು ಕಾರ್ಮಿಕರಿಗೆ ಮಾರಕವಾದ ನೀತಿಗಳನ್ನು ಕೇಂದ್ರ ಸರ್ಕಾರ ಅನುಸರಿಸುತ್ತದೆ ಎಂದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ಸುರೇಶ್ ಕಲ್ಲಾಗರ, ಕವಿರಾಜ್ ಎಸ್. ಕಾಂಚನ್, ಕಿರಣ್ ಹೆಗ್ಡೆ, ನಾಗೇಶ್ ನಾಯಕ್ ಉಪಸ್ಥಿತರಿದ್ದರು.

ಬಳಿಕ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ಇದನ್ನೂ ನೋಡಿ : ಅಖಿಲ ಭಾರತ ಮುಷ್ಕರ| ಪೊಲೀಸರ ದರ್ಪ – ಮಾನವೀಯತೆ ಕಳೆದುಕೊಂಡ ಸರಕಾರ Janashakthi Media

Donate Janashakthi Media

Leave a Reply

Your email address will not be published. Required fields are marked *