ಚಿಕ್ಕಮಗಳೂರು: ಜಿಲ್ಲೆಯ ಮಂಗನ ಕಾಯಿಲೆ (ಕೆಎಫ್‌ಡಿ) ವ್ಯಾಪಕವಾಗಿ ಹರಡುತ್ತಿದೆ. ಒಂದೇ ದಿನ ನಾಲ್ವರಲ್ಲಿ ಕಾಯಿಲೆ ದೃಢಪಟ್ಟಿದೆ. ಒಟ್ಟು 18 ಜನರಲ್ಲಿ ಕೆಎಫ್‌ಡಿ ಪತ್ತೆಯಾಗಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆಯಲಾಗಿದೆ. ಆರೋಗ್ಯ ಇಲಾಖೆ ಕಾಡಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಸದ್ಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಉಲ್ಬಣ
ಕಾಫಿನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದ್ದು, ಒಂದೇ ದಿನ ನಾಲ್ವರಲ್ಲಿ ಮಂಗನ ಕಾಯಿಲೆ ದೃಢ ಪಟ್ಟಿದೆ. ಕೊಪ್ಪ ಮತ್ತು ಎನ್ಆರ್ ಪುರ ತಾಲೂಕಿನ ನಾಲ್ವರಲ್ಲಿ ಕೆಎಫ್‌ಡಿ ದೃಢಪಟ್ಟಿದೆ. ಒಟ್ಟು ಜಿಲ್ಲೆಯಲ್ಲಿ 18 ಜನರಲ್ಲಿ ಕೆಎಫ್‌ಡಿ ಪತ್ತೆಯಾಗಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆದು ಚಿಕಿತ್ಸೆ ನೀಡಲಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಉಲ್ಬಣ
ಇದನ್ನು ಓದಿ: 2030 ವೇಳೆಗೆ ಭಾರತ-ಅಮೆರಿಕ 500 ಬಿಲಿಯನ್ ಡಾಲರ್ ವ್ಯಾಪಾರ ಗುರಿ
ದಿನದಿಂದ ದಿನಕ್ಕೆ ಕೆಎಫ್‌ಡಿ ಹೆಚ್ಚುತ್ತಲೇ ಇದೆ. ಹಾಗಾಗಿ ಮಂಗನ ಕಾಯಿಲೆ ಪತ್ತೆಯಾದ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ಮಾಡಿದ್ದು, ರಕ್ತದ ಮಾದರಿ ಸಂಗ್ರಹಿಸಿದ್ದಾರೆ. ಸದ್ಯ ಕಾಡಿಗೆ ತೆರಳದಂತೆ ಸೂಚನೆ ನೀಡಲಾಗಿದೆ.
ದಿನದಿಂದ ದಿನಕ್ಕೆ ಕೆಎಫ್‌ಡಿ ಹೆಚ್ಚುತ್ತಲೇ ಇದೆ. ಹಾಗಾಗಿ ಮಂಗನ ಕಾಯಿಲೆ ಪತ್ತೆಯಾದ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ಮಾಡಿದ್ದು, ರಕ್ತದ ಮಾದರಿ ಸಂಗ್ರಹಿಸಿದ್ದಾರೆ. ಸದ್ಯ ಕಾಡಿಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಕಳೆದ ವರ್ಷ ಜಿಲ್ಲೆಯಲ್ಲಿ 132 ಜನರಲ್ಲಿ KFD ಕಾಣಿಸಿಕೊಂಡು ನಾಲ್ವರನ್ನ ಬಲಿ ಪಡೆದಿತ್ತು. ಕಾಡಂಚಿನ ತಾಲೂಕುಗಳಾದ ಚಿಕ್ಕಮಗಳೂರು, ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ತನ್ನ ರುದ್ರರೂಪ ತಾಳುವ ಮುನ್ನ ಅರೋಗ್ಯ ಇಲಾಖೆ KFD ಅಲರ್ಟ್ ಘೋಷಣೆ ಮಾಡಿತ್ತು.
ಇದನ್ನೂ ನೋಡಿ: ಪ್ರೇಮಿಗಳ ದಿನದ ವಿಶೇಷ | ನೋಡಿದೇನೆ ಪ್ರೌಢಸುಂದರಿ | ಸಂಗೀತ, ಗಾಯನ : ಪಿಚ್ಚಳ್ಳಿ ಶ್ರೀನಿವಾಸ Janashakthi Media