ಪ್ರತಾಪ್‌ ನಗರ ಕಾರ್ಖೆನೆಯಲ್ಲಿ ಅಗ್ನಿ ಅನಾಹುತ, ಒಬ್ಬ ಕಾರ್ಮಿಕ ಸಾವು

ನವದೆಹಲಿ: ಇಲ್ಲಿನ ಪ್ರತಾಪ್ ನಗರ ಪ್ರದೇಶದ ಕಾರ್ಖಾನೆಯೊಂದರಲ್ಲಿ ಶನಿವಾರ ಮುಂಜಾನೆ ಅಗ್ನಿ ಅನಾಹುತ ಸಂಭವಿಸಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. 40 ಕ್ಕೂ ಹೆಚ್ಚು ಕಾರ್ಮಿಕರನ್ನು ರಕ್ಷಿಸಲಾಗಿದೆ.

ಮುಂಜಾನೆ 3.47ಕ್ಕೆ ಕರೆ ಬಂದಿದ್ದು, ತಕ್ಷಣವೇ 18 ಅಗ್ನಿಶಾಮಕ ವಾಹನಗಳನ್ನು ಕಳುಹಿಸಿಕೊಡಲಾಗಿದೆ. ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಅವಘಡಕ್ಕೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮಧ್ಯೆ, ಎಲ್‌ಪಿಜಿ ಸಿಲಿಂಡರ್ ಸೋರಿಕೆ ಅವಘಡಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿರುವುದಾಗಿ ‘ಎಎನ್‌ಐ’ ಟ್ವೀಟ್ ಮಾಡಿದೆ.

ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂದ್ದು,  18 ಅಗ್ನಿಶಾಮಕ  ಟ್ಯಾಂಕರ್‌ ಗಳು ಕಾರ್ಯನಿರ್ವಹಿಸುತ್ತಿವೆ, ನಾವು ಯಶಸ್ವಿಯಾಗಿ ಬೆಂಕಿಯನ್ನು ನಂದಿಸಿದ್ದೇವೆ  ಎಂದು ಅಗ್ನಿಶಾಮಕ ಅಧಿಕಾರಿ ರಾಜಿಂದರ್ ಅಟ್ವಾಲ್ ತಿಳಿಸಿದ್ದಾರೆ.

ಕಾರ್ಖಾನೆಯಲ್ಲಿ ಸೌಂದರ್ಯವರ್ಧಕಗಳು, ಮಕ್ಕಳ ಆಟಿಕೆಗಳು ಮತ್ತು ಚೀಲಗಳನ್ನು ತಯಾರಿಸಲು ಬಳಸಲಾಗುತ್ತದೆ. ಈ ಪ್ರದೇಶದಲ್ಲಿ ಸುಮಾರು 14 ಸಣ್ಣ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿವೆ. ಕಾರ್ಖಾನೆಗಳಲ್ಲಿನ ನೇಲ್ ಪಾಲಿಷ್ ಮತ್ತು ಪ್ಲಾಸ್ಟಿಕ್ ವಸ್ತುಗಳು ಬೆಂಕಿಯನ್ನು ಉಲ್ಬಣಗೊಳಿಸಿವೆ ಎಂದು ಪ್ರಾಥಮಿಕ ತನಿಖೆಗಳು ತಿಳಿಸಿವೆ. ಘಟನೆಯ ನಂತರ, ಉತ್ತರ ದೆಹಲಿ ಮೇಯರ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *