ವಾಷಿಂಗ್ಟನ್: 2008ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿ ಒಪ್ಪಿಕೊಂಡಿದೆ. ಪ್ರಧಾನಿ ಮೋದಿ ಎದುರಲ್ಲೇ ಅಮೆರಿಕ ಅಧ್ಯಕ್ಷ ಟ್ರಂಪ್ ಈ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: ಭ್ರಷ್ಟ ನೌಕರರಿಗೆ ಕಾನೂನಿನ ಕುಣಿಕೆ: ಸುಪ್ರೀಂ ಕೋರ್ಟ್ ತೀರ್ಪು
ಪ್ರಧಾನಿ ಮೋದಿ ಅವರು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. 2ನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಇದು ಮೋದಿ ಅವರ ಮೊದಲ ಭೇಟಿ.
ಪ್ರಧಾನಿ ಮೋದಿ ಅವರ ಜೊತೆ ದ್ವಿಪಕ್ಷೀಯ ಮಾತುಕತೆ ನಂತರ, ಮುಂಬೈ ದಾಳಿ ಆರೋಪಿಯನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಒಪ್ಪಿಕೊಂಡಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ನಾವು 26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿಯಾಗಿರುವ ಅತ್ಯಂತ ಅಪಾಯಕಾರಿ ವ್ಯಕ್ತಿಯನ್ನು ಭಾರತಕ್ಕೆ ಹಸ್ತಾಂತರಿಸುತ್ತಿದ್ದೇವೆ ಎಂದು ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ.
26/11 ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಪ್ರಸ್ತುತ ಅಮೆರಿಕದಲ್ಲಿ ಹೆಚ್ಚಿನ ಭದ್ರತೆಯ ಜೈಲಿನಲ್ಲಿದ್ದಾನೆ. ಭಾರತ ಹಲವು ವರ್ಷಗಳಿಂದ ಆತನನ್ನು ಹಸ್ತಾಂತರಿಸುವಂತೆ ಕೋರುತ್ತಿದೆ.
ಇದೇ ಜನವರಿ ತಿಂಗಳಲ್ಲಿ ಅಮೆರಿಕದ ಸುಪ್ರೀಂ ಕೋರ್ಟ್, ತಹವ್ವೂರ್ ರಾಣಾನ ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿ, ಆತನನ್ನು ಭಾರತಕ್ಕೆ ಗಡೀಪಾರು ಮಾಡಲು ದಾರಿ ಮಾಡಿಕೊಟ್ಟಿತು.
ಇದನ್ನೂ ನೋಡಿ: ಕಟ್ಟಡ ಕಾಮಗಾರಿ ವೇಳೆ ಗೋಡೆ ಕುಸಿತ – ಓರ್ವ ಕಾರ್ಮಿಕನಿಗೆ ಗಂಭೀರ ಗಾಯ Janashakthi Media