ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಒಪ್ಪಿಗೆ

ನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಒಪ್ಪಿಗೆ ಸೂಚಿಸಿದ್ದಾರೆ. ರಾಷ್ಟ್ರಪತಿ

ಶುಕ್ರವಾರ ಕಾನೂನು ಸಚಿವಾಲಯ ಪ್ರಕಟಿಸುವ ಅಧಿಸೂಚನೆಯಲ್ಲಿ ಈ ವಿಷಯವನ್ನು ತಿಳಿಸಿದೆ ಈ ಮಸೂದೆಯನ್ನು ಇನ್ನು ಮುಂದೆ ಅಧಿಕೃತ ಸಂವಿಧಾನದ (106ನೇ ತಿದ್ದುಪಡಿ) ಕಾಯ್ದೆ ಎಂದು  ಕರೆಯಲಾಗುವುದು ಎಂದಿದೆ.

ನಿಬಂಧನೆಗಳ ಪ್ರಕಾರ ಕೇಂದ್ರ ಸರ್ಕಾರ ಅಧಿಕೃತ ಗೆಜೆಟ್ ನೋಟಿಫಿಕೇಶನ್ ಪ್ರಕಟಿಸಿದ ದಿನದಿಂದ ಕಾಯ್ದೆ ಜಾರಿಯಾಗಲಿದೆ.

ಇದನ್ನೂ ಓದಿ: ಕಮಲ “ದಳವನ್ನು” ನುಂಗುತ್ತಾ? ಜೆಡಿಎಸ್‌ ಶವಪೆಟ್ಟಿಗೆಗೆ ಅಂತಿಮ ಮೊಳೆ ಹೊಡೆಯಲಿದೆಯೇ ಬಿಜೆಪಿ?

ನಾರಿ ಶಕ್ತಿ ವಂದನ್ ಅಧಿನಿಯಮ್ ಮಹಿಳೆಯರಿಗೆ ಲೋಕಸಭೆಯಲ್ಲಿ ಹಾಗೂ ವಿಧಾನಸಭೆಗಳಲ್ಲಿ ಶೇ.33 ರಷ್ಟು ಮೀಸಲಾತಿಯನ್ನು ಕಲ್ಪಿಸಲು ಈ ಮಸೂದೆಯನ್ನು ಉಭಯ ಸದನಗಳಲ್ಲಿಯೂ ಅಂಗೀಕರಿಸಲಾಗಿದ್ದು ಹೊಸ ಸಂಸತ್ ಭವನದಲ್ಲಿ ಅಂಗೀಕರಿಸಲಾಯಿತು.

ಸೆಪ್ಟೆಂಬರ್ 20 ರಂದು, ಮಸೂದೆಯನ್ನು ಅಂಗೀಕರಿಸಲಾಗಿತ್ತು, 454 ಸದಸ್ಯರು ಶಾಸನದ ಪರವಾಗಿ ಮತ ಚಲಾಯಿಸಿದರು ಮತ್ತು ವಿರುದ್ಧ ಇಬ್ಬರು ಮತ ಚಲಾಯಿಸಿದ್ದರು. ವಿರೋಧ ಪಕ್ಷದ ಸದಸ್ಯರು ಮಂಡಿಸಿದ ತಿದ್ದುಪಡಿಗಳು ಋಣಾತ್ಮಕವಾಗಿದ್ದು, ಕರಡು ಶಾಸನದ ಪ್ರತ್ಯೇಕ ಷರತ್ತುಗಳ ಮೇಲೆ ಮತ ಚಲಾಯಿಸಲಾಯಿತು. ಸೆ.21 ರಂದು ರಾಜ್ಯಸಭೆಯಲ್ಲಿ ನಾರಿ ಶಕ್ತಿ ವಂದನ್ ಅಧಿನಿಯಮವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು.

ವಿಡಿಯೋ ನೋಡಿ: ಖಾಲಿ ಹುದ್ದೆಗಳಿಗೆ ನಿವೃತ್ತಿ ಹೊಂದಿದವರೇ ಮರು ನೇಮಕವಾದರೆ ಯುವಕರ ಗತಿ ಏನು? ಎಂ.ಎನ್‌ ವೇಣುಗೋಪಾಲ್‌ ಜೊತೆ ಮಾತುಕತೆ

Donate Janashakthi Media

Leave a Reply

Your email address will not be published. Required fields are marked *