ಮದ್ದೂರು | ರಸಗೊಬ್ಬರದ ಪೂರೈಕೆಯಲ್ಲಿ ಲೋಪ ಕೃಷಿ ಅಧಿಕಾರಿಗಳ ವಿರುಧ್ದ ರೈತರು ಆಕ್ರೋಶ

ಮದ್ದೂರು: ಪಟ್ಟಣದ ಟಿಎಪಿಸಿಎಂಎಸ್‌ನ ಆವರಣದಲ್ಲಿ ಗುರುವಾರ ಕೃಷಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಕಬ್ಬು, ಭತ್ತ, ರಾಗಿ ಬೆಳೆಗಳ ಇಳುವರಿ ಹೆಚ್ಚಿಸುವ ತರಬೇತಿ ಹಾಗೂ ಅರಿವು ಕಾರ್ಯಕ್ರಮದಲ್ಲಿ ರಸಗೊಬ್ಬರದ ಪೂರೈಕೆಯಲ್ಲಿ ಲೋಪ ಸೇರಿದಂತೆ ಕೃಷಿ ಅಧಿಕಾರಿಗಳು ಬೇಜವಾಬ್ದಾರಿ ವರ್ತನೆ ತೋರುತ್ತಿದ್ದಾರೆ ಎಂದು ರೈತರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮದ್ದೂರು

ಉಪಯುಕ್ತ ಕಾರ್ಯಕ್ರಮವಿದ್ದರೂ ರೈತರಿಗೆ ಮುಂಚಿತವಾಗಿ ಏಕೆ ಮಾಹಿತಿ ನೀಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಸರಿಯಾಗಿ ಮಾಹಿತಿ ನೀಡಿದ್ದರೆ ಕುರ್ಚಿಗಳು ಖಾಲಿ ಇರುತ್ತಿರಲಿಲ್ಲ. ರೈತರಿಗೋಸ್ಕರ ಕಾರ್ಯಕ್ರಮ ಆಯೋಜಿಸಿದಿದ್ದೀರ, ಆದರೆ ಸೊಸೈಟಿ ಕಾರ್ಯದರ್ಶಿಗಳು, ರಸಗೊಬ್ಬರ ಹಾಗೂ ಕೀಟ ನಾಶಕ ಅಂಗಡಿಯವರೇ ಹೆಚ್ಚಾಗಿದ್ದಾರೆ ಎಂದು ಆಕ್ರೋಶಗೊಂಡರು. ಮದ್ದೂರು

ಇದನ್ನೂ ಓದಿ: ಬೀದಿ ವ್ಯಾಪಾರಿಗೆ ಕಿರುಕುಳ ಆತ್ಮಹತ್ಯೆಗೆ ಯತ್ನ; ಮಹಿಳೆ ಗಂಭೀರ

ಕಾರ್ಯಕ್ರಮವು ಆರಂಭವಾಗುತ್ತಿದ್ದಂತೆಯೇ ಕಾರ್ಯಾಗಾರಕ್ಕೆ ಆಗಮಿಸಿದ್ದ ಬೆರಳೆಣಿಕೆಯಷ್ಟಿದ್ದ ರೈತರಲ್ಲಿ ಹಲವರು ಎದ್ದು ನಿಂತು ‘ನೀವು ರೈತರಿಗೆ ಯಾವುದೇ ಉಪಯುಕ್ತ ಮಾಹಿತಿ ನೀಡುತ್ತಿಲ್ಲ, ಅನುಕೂಲ ಮಾಡಿಕೊಡುತ್ತಿಲ್ಲ ಎಂಬುದಕ್ಕೆ ಈ ಕಾರ್ಯಕ್ರಮವೇ ಸಾಕ್ಷಿ ಎಂದು ದೂರಿದರು.

ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ನಮ್ಮ ಜಿಲ್ಲೆಯವರೇ ಆಗಿದ್ದರೂ ತಾಲ್ಲೂಕಿನಲ್ಲಿ ಯೂರಿಯಾ ಸೇರಿದಂತೆ ಅಗತ್ಯ ರಸಗೊಬ್ಬರಗಳ ಕೊರತೆಯಿದೆ. ರೈತರು ಏನಾದರೂ ಕೇಳಿದರೆ ಉಡಾಫೆ ಉತ್ತರ ನೀಡುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮದ್ದೂರು

ಈ ವೇಳೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಶೋಕ್ ಮಾತನಾಡಿ, ಇಲ್ಲಿನ ಸ್ಥಳೀಯ ಕೃಷಿ ಅಧಿಕಾರಿಗಳಿಂದ ಯಾವುದರಲ್ಲಿ ಲೋಪವಾಗಿದೆ ಎಂಬ ಮಾಹಿತಿ ಪಡೆಯುತ್ತೇನೆ ಎಂದು ಹೇಳಿ ರೈತರನ್ನು ಸಮಾಧಾನಪಡಿಸಿದ ಬಳಿಕ ಕಾರ್ಯಕ್ರಮ ಮುಂದುವರೆಯಿತು.

ಉಪ ಕೃಷಿ ನಿರ್ದೇಶಕ ಮುನೇಗೌಡ, ಸಹಾಯಕ ಕೃಷಿ ನಿರ್ದೇಶಕಿ ಪ್ರತಿಭಾ, ಟಿಎಪಿಸಿಎಂಎಸ್‌ನ ಅಧ್ಯಕ್ಷ ಮಹದೇವು, ಪಶುಸಂಗೋಪನಾ ಇಲಾಖೆಯ ಅಧಿಕಾರಿ ರವಿಶಂಕರ್‌, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್, ಅಧಿಕಾರಿಗಳಾದ ರೂಪಾ, ಗವಾಸ್ಕರ್ ಸೇರಿದಂತೆ ಹಲವರು ಹಾಜರಿದ್ದರು.

ಇದನ್ನೂ ನೋಡಿ: ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಒಳಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *