ಕಾವೇರಿ‌ ನದಿಯಲ್ಲಿ ಕೃಷಿ ವಿಜ್ಞಾನಿ ಡಾ. ಸುಬ್ಬಣ್ಣ ಅಯ್ಯಪ್ಪನ್ ಶವ ಪತ್ತೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಕಾವೇರಿ‌ ನದಿಯಲ್ಲಿ  ಕೃಷಿ ವಿಜ್ಞಾನಿ, ಪದ್ಮಶ್ರೀ ಪುರಸ್ಕೃತ ಡಾ. ಸುಬ್ಬಣ್ಣ ಅಯ್ಯಪ್ಪನ್ (70) ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಮೈಸೂರಿನ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ನಿ ಜೊತೆಗೆ ವಾಸವಾಗಿದ್ದ ಡಾ. ಸುಬ್ಬಣ್ಣ ಅಯ್ಯಪ್ಪನ್​, ಮೇ 07 ರಂದು ಮನೆಯಿಂದ ನಾಪತ್ತೆಯಾಗಿದ್ದರು. ಕಾವೇರಿ‌

ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಸದ್ಯ ಶ್ರೀರಂಗಪಟ್ಟಣ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಾವೇರಿ‌

ನಿನ್ನೆ ಸಂಜೆ ನದಿಯಲ್ಲಿ ಅಪರಿಚಿತ ಶವದ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. ಸ್ಥಳಕ್ಕೆ ಬಂದು ಶವ ಮೇಲೆ ತೆಗೆದು ನೋಡಿದಾಗ ವಿಜ್ಞಾನಿಯ ಗುರುತು ಪತ್ತೆ ಆಗಿದೆ. ನದಿ ದಡದಲ್ಲಿ ವಿಜ್ಞಾನಿ ಅಯ್ಯಪ್ಪನ್ ಅವರ ಸ್ಕೂಟರ್​ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಡಾ.ಸುಬ್ಬಣ್ಣ ಅಯ್ಯಪ್ಪನ್​ ಮನೆಯಿಂದ ಹೊರಗೆ ಹೋದರವರು ವಾಪಸ್ಸ್​ ಆಗಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕಾವೇರಿ‌

ಇದನ್ನೂ ಓದಿ: ರೈತರಿಗೆ ವಿತರಿಸುವ ಪರಿಹಾರದ ಹಣಕ್ಕೆ ಜಿಎಸ್​ಟಿ ವಿಧಿಸುವಂತಿಲ್ಲ: ಹೈಕೋರ್ಟ್

ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ

ಡಾ.ಸುಬ್ಬಣ್ಣ ಅಯ್ಯಪ್ಪನ್​ ಮೈಸೂರಿನ ವಿಶ್ವೇಶ್ವರ ನಗರ ಕೈಗಾರಿಕಾ ಪ್ರದೇಶದ ಅಕ್ಕಮಹಾದೇವಿ ರಸ್ತೆಯಲ್ಲಿ ವಾಸಿಸುತ್ತಿದ್ದರು. ಅವರ ಸ್ಕೂಟರ್ ನದಿಯ ದಡದಲ್ಲಿ ಪತ್ತೆಯಾಗಿದೆ. ಮೂರು ದಿನಗಳ ಹಿಂದೆ ಶ್ರೀರಂಗಪಟ್ಟಣದ ಸಾಯಿಬಾಬಾ ಆಶ್ರಮದ ಬಳಿ ನದಿಗೆ ಹಾರಿದ್ದಾರೆ ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನದಿ ದಡಕ್ಕೆ ಧ್ಯಾನಕ್ಕಾಗಿ ಹೋಗುತ್ತಿದ್ದರು: ವಕೀಲ ಶ್ರೀನಿಧಿ

ಸುಬ್ಬಣ್ಣ ಅಯ್ಯಪ್ಪನ್ ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಮತ್ತು ಶ್ರೀರಂಗಪಟ್ಟಣದ ಕಾವೇರಿ ನದಿಯ ದಡಕ್ಕೆ ಧ್ಯಾನಕ್ಕಾಗಿ ಹೋಗುತ್ತಿದ್ದರು. ದುರದೃಷ್ಟವಶಾತ್, ಅವರ ದೇಹವು ನದಿಯಲ್ಲಿ ಪತ್ತೆಯಾಗಿದೆ ಎಂದು ಅವರ ಸಂಬಂಧಿ ಮತ್ತು ವಕೀಲ ಶ್ರೀನಿಧಿ ಎಂಬುವವರು ಹೇಳಿದ್ದಾರೆ.

1955 ಡಿಸೆಂಬರ್ 10 ರಂದು ಚಾಮರಾಜನಗರ ಜಿಲ್ಲೆಯ ಯಳಂದೂರಿನಲ್ಲಿ ಡಾ.ಸುಬ್ಬಣ್ಣ ಅಯ್ಯಪ್ಪನ್ ಅವರು ಜನಿಸಿದರು. 1975 ಮಂಗಳೂರಿನಲ್ಲಿ ಮೀನುಗಾರಿಕೆ ವಿಜ್ಞಾನದಲ್ಲಿ ಪದವಿ (BFSc) ಮತ್ತು 1977 ಮೀನುಗಾರಿಕೆ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ (MFSc) ಪಡೆದರು. 1998ರಲ್ಲಿ ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದುಕೊಂಡಿದ್ದಾರೆ.

ಹಲವೆಡೆ ಸೇವೆ

ಇನ್ನು ಡಾ.ಸುಬ್ಬಣ್ಣ ಅಯ್ಯಪ್ಪನ್​ ಅವರು ಕೃಷಿ ಮತ್ತು ಮೀನುಗಾರಿಕೆ (ಜಲಕೃಷಿ) ವಿಜ್ಞಾನಿಯಾಗಿದ್ದರು. ದೆಹಲಿ, ಮುಂಬೈ, ಭೋಪಾಲ್, ಬರಾಕ್‌ಪುರ, ಭುವನೇಶ್ವರ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ಭುವನೇಶ್ವರದ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಫ್ರೆಶ್‌ವಾಟರ್ ಅಕ್ವಾಕಲ್ಚರ್ (ಸಿಐಎಫ್‌ಎ) ನಿರ್ದೇಶಕರಾಗಿ, ಮುಂಬೈನ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಫಿಶರೀಸ್ ಎಜುಕೇಶನ್ (ಸಿಐಎಫ್‌ಇ) ನಿರ್ದೇಶಕರಾಗಿ, ಯೂನಿಯನ್ ಡಿಪಾರ್ಟ್‌ಮೆಂಟ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ ಅಂಡ್ ಎಜುಕೇಶನ್ (ಡಿಎಆರ್‌ಇ) ಕಾರ್ಯದರ್ಶಿಯಾಗಿ, ಹೈದರಾಬಾದ್‌ನ ನ್ಯಾಷನಲ್ ಫಿಶರೀಸ್ ಡೆವಲಪ್‌ಮೆಂಟ್ ಬೋರ್ಡ್‌ನ ಸ್ಥಾಪಕ ಮುಖ್ಯ ಕಾರ್ಯನಿರ್ವಾಹಕರಾಗಿ ಮತ್ತು ನ್ಯಾಷನಲ್ ಅಕ್ರಿಡಿಟೇಶನ್ ಬೋರ್ಡ್ ಫಾರ್ ಟೆಸ್ಟಿಂಗ್ ಆಯಂಡ್​ ಕ್ಯಾಲಿಬ್ರೇಶನ್ ಲ್ಯಾಬೋರೇಟರೀಸ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಸುಬ್ಬಣ್ಣ ಅಯ್ಯಪ್ಪನ್​ ಅವರು ಭಾರತದ ‘ನೀಲಿ ಕ್ರಾಂತಿ’ಯಲ್ಲಿ ಪ್ರಮುಖ ಪಾತ್ರ ವಹಿಸಿದವರು. 2022 ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದರು. ಕೃಷಿ ಸಂಶೋಧನೆಯಲ್ಲಿ ಸಕ್ರಿಯರಾಗಿರುವುದರ ಜೊತೆಗೆ, ವಿವಿಧ ಸಂಸ್ಥೆಗಳನ್ನು ನಿರ್ಮಿಸಿದ್ದಾರೆ. ಇಂಫಾಲ್‌ನಲ್ಲಿರುವ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯದ (CAU) ಉಪಕುಲಪತಿಯಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

ಇದನ್ನೂ ನೋಡಿ: ಕಾರ್ಲ್ ಮಾರ್ಕ್ಸ್ ಜನ್ಮದಿನದ ವಿಶೇಷ :ಮಾರ್ಕ್ಸರವರ ಜೀವನ ಮತ್ತು ಚಿಂತನೆವಿಶ್ಲೇಷಣೆ ಡಾ. ಬಿ.ಆರ್. ಮಂಜುನಾಥ

Donate Janashakthi Media

Leave a Reply

Your email address will not be published. Required fields are marked *