ನವದೆಹಲಿ: ಈರುಳ್ಳಿ ಬೆಲೆ ಏರಿಕೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ (ಅಕ್ಟೋಬರ್-29) ವಾಗ್ದಾಳಿ ನಡೆಸಿದ್ದು, ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ಪಂಚ ರಾಜ್ಯಗಳ ಜನರು ಬೆಲೆ ಏರಿಕೆಯ ರಹಸ್ಯವನ್ನು ಬಿಚ್ಚಿಡಲಿದ್ದಾರೆ ಎಂದು ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯ ಚಿಲ್ಲರೆ ಮಾರುಕಟ್ಟೆಯಲ್ಲಿ ಪೂರೈಕೆ ಕಡಿಮೆಯಾದ ಹಿನ್ನೆಲೆಯಲ್ಲಿ ಈರುಳ್ಳಿ ಬೆಲೆ ಕೆ.ಜಿಗೆ ₹65-₹80ಕ್ಕೆ ಏರಿಕೆಯಾದ ನಂತರ ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.
ಕಳೆದ ಒಂಬತ್ತೂವರೆ ವರ್ಷಗಳ ಬಿಜೆಪಿ ಸರ್ಕಾರದ ಹಣದುಬ್ಬರದ ಹೊರೆಯಿಂದ ಜನರು ಕಣ್ಣೀರು ಹಾಕುತ್ತಿದ್ದಾರೆ ಎಂದು ಖರ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹಣದುಬ್ಬರದ ವಿಚಾರದಲ್ಲಿ ಪ್ರತಿ ಬಾರಿಯೂ ಮೋದಿ ಸರ್ಕಾರ ಸಾರ್ವಜನಿಕರನ್ನು ಗೇಲಿ ಮಾಡುತ್ತಾ ಬಂದಿದೆ. ಹಣದುಬ್ಬರ ಕಾಣಿಸುತ್ತಿಲ್ಲ, ನಾನು ಈರುಳ್ಳಿ ತಿನ್ನುವುದಿಲ್ಲ, ಇದು ಇತರ ದೇಶಗಳಿಗಿಂತ ಉತ್ತಮವಾಗಿದೆ ಎಂಬುವುದಾಗಿ ಜನರನ್ನು ಲೇವಡಿ ಮಾಡಲಾಗುತ್ತಿದೆ ಎಂದಿದ್ದಾರೆ.
ಈಗ ಈರುಳ್ಳಿ ಬೆಲೆ ಮತ್ತೊಮ್ಮೆ ಏಕೆ ಗಗನಕ್ಕೇರಿದೆ ಎನ್ನುವ ರಹಸ್ಯವನ್ನು ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ತೆರೆದಿಡಲಿದ್ದಾರೆ ಎಂದು ಖರ್ಗೆ ಕಿಡಿಕಾರಿದ್ದಾರೆ.
ವಿಡಿಯೋ ನೋಡಿ:ಕೃಷಿ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದಎಂಎಸ್ ಸ್ವಾಮಿನಾಥನ್Janashakthi Media