ಬೆಂಗಳೂರು: ದೇವನಹಳ್ಳಿ ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಗುರುವಾರ ಜುಲೈ-27 ರಂದು ಹೈದರಾಬಾದ್ಗೆ ತೆರಳಬೇಕಿದ್ದ ರಾಜ್ಯಪಾಲ ಥಾವರಚಂದ್ ಗೆಹೆಲೋತ್ ಅವರನ್ನು ಬಿಟ್ಟು ಏರ್ ಏಷ್ಯಾ ವಿಮಾನ ಹಾರಾಟ ನಡೆಸಿರುವ ಘಟನೆ ನಡೆದಿದೆ.
ಇದನ್ನೂ ಓದಿ:ನಾಳೆ ರಾಷ್ಟ್ರಪತಿಗಳಿಂದ ಚಾಮರಾಜನಗರದ ಸಿಐಎಂಎಸ್ ಬೋಧನಾ ಆಸ್ಪತ್ರೆ ಉದ್ಘಾಟನೆ
ಗುರುವಾರ ಮಧ್ಯಾಹ್ನ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ರಾಜ್ಯಪಾಲರು,2 ಗಂಟೆಗೆ ವಿಮಾನದ ಮೂಲಕ ಹೈದರಾಬಾದ್ಗೆ ಹೋಗುವುದಿತ್ತು. ರಾಜ್ಯಪಾಲರನ್ನು ವಿಐಸಿ ಲಾಂಜ್ನಲ್ಲಿ ಕುಳಿರಿಸಿದ ಅಧಿಕಾರಿಗಳು,ಅವರ ಲಗೇಜ್ಗಳನ್ನು ವಿಮಾನದಲ್ಲಿ ಇರಿಸಲು ಏರ್ ಏಷ್ಯಾದ ಸಿಬ್ಬಂದಿಗೆ ಹಸ್ತಾಂತರಿಸಿದ್ದರು. ಲಗೇಜ್ ಹಾಕಿಸಿಕೊಂಡ ವಿಮಾನದ ಸಿಬ್ಬಂದಿ, ಅವರನ್ನು ಬಿಟ್ಟು ಹೈದರಾಬಾದ್ ಕಡೆಗೆ ಹಾರಾಟ ನಡೆಸಿದ್ದಾರೆ. ಒಂದು ನಿಮಿಷ ತಡವಾಗಿ ಬಂದಿದ್ದಕ್ಕೆ ರಾಜ್ಯಪಾಲರಿಗೆ ವಿಮಾನ ತಪ್ಪಿದೆ.
ಮಧ್ಯಾಹ್ನ 2 ಗಂಟೆಗಿದ್ದ ವಿಮಾನ ಹತ್ತಲು 1.30ಕ್ಕೆ ರಾಜ್ಯಪಾಲರು ಬಂದಿದ್ದರು. ಪ್ರೋಟೋ ಕಾಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವರಿಗೆ ವಿಮಾನ ತಪ್ಪಿದೆ. ನಂತರ ಇನ್ನೊಂದು ವಿಮಾನದ ಮೂಲಕ ಹೈದಾರಬಾದ್ಗೆ ಪ್ರಯಾಣ ಬೆಳೆಸಿದರು ಎಂದು ತಿಳಿದು ಬಂದಿದೆ.
ವಿಐಪಿ ಲಾಂಜ್ನಲ್ಲಿ ಅವರನ್ನು ಕುಳ್ಳರಿಸಿ,ಸೂಕ್ತವಾಗಿ ವಿಮಾನ ನಿಲ್ದಾಣ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವಲ್ಲಿ ಅಧಿಕಾರಿಗಳು ಎಡವಿದ್ದು, ಹಿರಿಯ ಅಧಿಕಾರಿಗಳು ಘಟನೆ ಕುರಿತು ಮಾಹಿತಿ ಕೇಳಿದ್ದಾರೆ.